ಕುಷ್ಠರೋಗವು ಬ್ಯಾಕ್ಟೀರಿಯಾ ಸೋಂಕಿನಿಂದ ಕೂಡಿದ್ದು, ನಿಧಾನವಾಗಿ ಈ ರೋಗವು ಚರ್ಮ ಮತ್ತು ನರಮಂಡಲಕ್ಕೆ ಹಾನಿಯನ್ನುಂಟು ಮಾಡುತ್ತದೆ. ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾಗಳು ಈ ಸೋಂಕನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಕುಷ್ಠರೋಗವು ಶರೀರ ವಿರೂಪಗೊಳ್ಳುವಿಕೆ ಮತ್ತು ಅಂಗವೈಕಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.