ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ @siddaramaiah ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘’ಅಡ್ಡಕಸುಬಿ’’ ಬಜೆಟ್ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ.
ಮುಖ್ಯಮಂತ್ರಿ ಶ್ರೀ @siddaramaiah ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಅಂಶಗಳೇ ಇಲ್ಲ. ಇದನ್ನು ಖಂಡಿಸಿ, ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.