ಹೂವಿನಹಡಗಲಿ: ತಾಲ್ಲೂಕಿನ ತಾಂಡಾವೊಂದರಲ್ಲಿ 10 ವರ್ಷದ ಬಾಲಕಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ ಸಂಜೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ರಾತ್ರಿಯಾದರೂ ಮನೆಗೆ ವಾಪಾಸ್ ಬರಲಿಲ್ಲ. ಪೋಷಕರು ಹುಡುಕಾಡಿದಾಗ ತಾಂಡಾ ಸಮೀಪದ ಹಳ್ಳದ ನೀರಿನ ಗುಂಡಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಸಮೀಪದಲ್ಲಿ ಬಾಲಕಿಯ ಚಪ್ಪಲಿ, ತಂಬಿಗೆ ಬಿದ್ದಿದ್ದು, ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸುವಂತೆ ಪೋಷಕರು ದೂರು ನೀಡಿದ್ದಾರೆ. ಶಾಸಕ ಕೃಷ್ಣನಾಯ್ಕ ತಾಂಡಾಕ್ಕೆ ಭೇಟಿ ನೀಡಿ ಬಾಲಕಿ ಪೋಷಕರಿಗೆ ಸಾಂತ್ವನ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ‘ಎಸ್ಎಫ್ಎಲ್ ವರದಿ, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯಾಂಶ ತಿಳಿಯಲಿದೆ. ವರದಿ ಆಧರಿಸಿ ತನಿಖೆ ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.