ಬಳ್ಳಾರಿ: ಸಂಡೂರು ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಹೇಳಿದ್ದಾರೆ.

ಮತ ಎಣಿಕೆ ಕೇಂದ್ರಕ್ಕೆ ಕಾರ್ಯಕರ್ತರು ಮುಖಂಡರೊಂದಿಗೆ ಬಂದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. "ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆಯ ಇದೆ. ಜನ ಬದಲಾವಣೆ ಬಯಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹೀಗಾಗಿ ನನ್ನ ಗೆಲುವು ಖಚಿತ" ಎಂದು ಅವರು ತಿಳಿಸಿದರು.

"ಬಿಜೆಪಿ ನಾಯಕರು ಈ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಿದ್ದಾರೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದೆ. ಸೋಲುವ ಭೀತಿಯಿಂದಲೇ ಸಿಎಂ ಸಿದ್ದರಾಮಯ್ಯ ಮೂರು ದಿನ ಕ್ಷೇತ್ರದಲ್ಲೇ ಉಳಿದು ಪ್ರಚಾರ ಮಾಡಿದರು. 14 ವರ್ಷಗಳ ಬಳಿಕ ಜನಾರ್ದನ ರೆಡ್ಡಿ ಜಿಲ್ಲೆಗೆ ಬಂದಿರುವುದು ನಮಗೆ ಪೂರಕವಾಗಲಿದೆ" ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.