ಬೈಲಹೊಂಗಲ (ಬೆಳಗಾವಿ ಜಿಲ್ಲೆ): ವಿಷಾಹಾರದಿಂದ ತೊಂದರೆ ಒಳಗಾದ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದೂಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ 23 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲ ವಿದ್ಯಾರ್ಥಿಗಳೂ ಎಂದಿನಂತೆ ಸೋಮವಾರ ಬೆಳಿಗ್ಗೆ ಕೂಡ ಉಪಾಹಾರ ಸೇವಿಸಿದ್ದರು. ಚಪಾತಿ, ಅನ್ನ ಸಾರು ನೀಡಲಾಗಿತ್ತು. ಸಾರಿನಲ್ಲಿ ಹಲ್ಲಿ ಬಿದ್ದಿದ್ದನ್ನು ಕೆಲವು ಮಕ್ಕಳು ಗಮನಿಸಿದರು. ಕೆಲ ಸಮಯದ ನಂತರ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು. ಇದನ್ನರಿತ ಶಿಕ್ಷಕರು ಎಲ್ಲರನ್ನೂ ಇಂಚಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಕೆಲ ಮಕ್ಕಳು ಚೇತರಿಸಿಕೊಂಡಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿದ್ದಾರೆ.

ಯಾರಿಗೂ ಅಪಾಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.