ಅಥಣಿ: ‘ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿದ್ದೇನೆ ಎಂದು ತೋರಿಸಿಕೊಳ್ಳಲು ‘ಪೆನ್‌ಡ್ರೈವ್’ ಬಗ್ಗೆ ಮಾತನಾಡಿದ್ದಾರೆ. ಅವರ ‘ಪೆನ್‌ಡ್ರೈವ್’ ಕೂಡ ನನ್ನ ಬಳಿ ಇದೆ. ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.

ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪೆನ್‌ಡ್ರೈವ್ ಇಟ್ಟುಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಾರಷ್ಟೇ. ಅವರ ಬಳಿ ಯಾವುದೇ ಪುರಾವೆ ಇಲ್ಲ. ವಿರೋಧ ಪಕ್ಷದಲ್ಲಿದ್ದವರು ಸರ್ಕಾರದ ವಿರುದ್ಧ ಏನಾದರೂ ಹೇಳಬೇಕು ಎಂದು ಹೇಳುತ್ತಿದ್ದಾರೆ’ ಎಂದರು.

‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಸುಪ್ರಿಂಕೋರ್ಟ್ ವಾಪಸ್ ಪಡೆದಿದ್ದು ಸ್ವಾಗತಾರ್ಹ. ನ್ಯಾಯಾಲಯವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿದಿದೆ. ರಾಜಕೀಯದಲ್ಲಿ ಟೀಕೆ– ಟಿಪ್ಪಣಿ ಸಹಜ. ಅದನ್ನೇ ದೊಡ್ಡ ಪ್ರತಿಷ್ಠೆ ಮಾಡಿಕೊಂಡು, ಮಾನಹಾನಿ ಕೇಸ್ ಹಾಕಿದ್ದು ವಿಚಿತ್ರ ಬೆಳವಣಿಗೆ. ಯಾವಾಗಲೂ ಸತ್ಯಕ್ಕೆ ಜಯವಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.