ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 12 ವಿವಿಧ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ (ಎವಿಇಎಸ್) ಅಂಚೆ ಮತದಾನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಹೇಳಿದರು.

ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇಲಾಖಾವಾರು ಅಗತ್ಯ ಸೇವೆಗಳ ಗೈರು ಮತದಾರರ ಅರ್ಹ ಮತದಾರರ ಪಟ್ಟಿ ನೀಡಿದ ನಂತರ 12ಡಿ ನಮೂನೆಗಳಲ್ಲಿ ಭರ್ತಿ ಮಾಡಿ, ಮಾರ್ಚ್ 22ರೊಳಗೆ ಸಲ್ಲಿಸಬೇಕು. ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾದ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ)ನಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನ ಮಾಡಲು ಅವಕಾಶವಿದೆ. ಅಂಚೆ ಮೂಲಕ ಅಂಚೆ ಮತದಾನ ಪತ್ರ ನೀಡುವ/ ತಲುಪಿಸುವ ವ್ಯವಸ್ಥೆ ಈ ಬಾರಿ ಇರುವುದಿಲ್ಲ ಎಂದು ಹೇಳಿದರು.

ಅಗತ್ಯ ಸೇವೆಗಳ 12 ಇಲಾಖೆಗಳು: ವಿದ್ಯುತ್, ಬಿಎಸ್ಎನ್ಎಲ್, ರೈಲ್ವೆ, ದೂರದರ್ಶನ, ಆಲ್ ಇಂಡಿಯಾ ರೇಡಿಯೊ, ಆರೋಗ್ಯ ಇಲಾಖೆ, ವಾಯುಪಡೆ, ಬಸ್ ಸೇವೆಗಳು (ಕೆಎಸ್ಆರ್ಟಿಸಿ/ಬಿಎಂಟಿಸಿ), ಅಗ್ನಿಶಾಮಕ ಸೇವೆ, ಭಾರತ ಚುನಾವಣಾ ಆಯೋಗದಿಂದ ಮತದಾನದ ದಿನದಂದು ಚುನಾವಣಾ ವರದಿಗಾಗಿ ಅಧಿಕೃತಗೊಂಡ ಮಾಧ್ಯಮ ವ್ಯಕ್ತಿಗಳು, ಸಂಚಾರ ಪೊಲೀಸರು, ಆಂಬ್ಯುಲೆನ್ಸ್ ಸೇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.