ಬೆಂಗಳೂರು: ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ.

ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆಗಳಿಗೆ ಕಾಯಂ ಶಿಕ್ಷಕ, ಉಪನ್ಯಾಸ ಕರನ್ನು ನೇಮಿಸಿಕೊಳ್ಳಲು ನಿರ್ಧರಿಸ ಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನೇಮಕವಾಗುವವರೆಗೆ ಅಥವಾ 2024–25ನೇ ಶೈಕ್ಷಣಿಕ ಸಾಲಿಗೆ ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಲ್ಲಿರುವ ಎಸ್ಡಿಎಂಸಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯಿಂದ (ಸಿಡಿಸಿ) ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಜೂನ್ 7ರಂದು ಸುತ್ತೋಲೆ ಹೊರಡಿಸಿದ್ದಾರೆ.

ಬಿಬಿಎಂಪಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆ
ಗಳಿಗೆ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಅತಿಥಿ ಶಿಕ್ಷಕರು, ಉಪನ್ಯಾಸಕ ರನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಪಾಲಿಕೆ ಶಿಶುವಿಹಾರ ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರನ್ನು ಶಿಶುವಿಹಾರಗಳಿಗೆ ಹತ್ತಿರವಿರುವ ಪ್ರಾಥಮಿಕ ಶಾಲೆ ಮುಖ್ಯಸ್ಥರು ಎಸ್ಡಿಎಂಸಿ ಮೂಲಕ ನೇಮಕ ಮಾಡಿ ಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಶಿಶುವಿಹಾರ ಮತ್ತು ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ₹19,366, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹22,840,ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ ₹25,697 ಮತ್ತು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹27,897, ಸ್ನಾತಕೋತ್ತರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ
₹30,897 ಹಾಗೂ ಗಣಕಯಂತ್ರ ಅತಿಥಿ ಉಪನ್ಯಾಸಕರಿಗೆ ₹22,053 ಗೌರವ ಸಂಭಾವನೆ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.