ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಗರ್ತಪೇಟೆ ಘಟನೆ: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ– ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿನ ನಗರ್ತಪೇಟೆಯಲ್ಲಿನ ಮೊಬೈಲ್ ಮಳಿಗೆಯೊಂದರ ಮಾಲೀಕ ಮುಕೇಶ್ ಅವರ ಮೇಲಿನ ಹಲ್ಲೆ ಪ್ರಕರಣ
Published : 19 ಮಾರ್ಚ್ 2024, 4:51 IST
Last Updated : 19 ಮಾರ್ಚ್ 2024, 4:51 IST
ಫಾಲೋ ಮಾಡಿ
Comments

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿನ ಮೊಬೈಲ್ ಮಳಿಗೆಯೊಂದರ ಮಾಲೀಕ ಮುಕೇಶ್ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕರ್ಕಶ ಶಬ್ದಕ್ಕೆ ದಾಂಧಲೆ ಆಗಿದೆ ಎಂದು ಪೊಲೀಸರು ಮೊದಲು ಎಫ್‌ಐಆರ್ ದಾಖಲಿಸಿದ್ದರು. ಆದರೆ, ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸೂರ್ಯ ತಿಳಿಸಿದ್ದಾರೆ.

‘ಕಾಂಗ್ರೆಸ್‌ನ ಆಡಳಿತದಲ್ಲಿ ಹಿಂದೂಗಳನ್ನು ತೃತೀಯ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಲಾಗುತ್ತದೆ. ಪುಂಡರಿಂದ ಹಲ್ಲೆಗೆ ಒಳಗಾದ ನಂತರ ಪೊಲೀಸರಿಗೆ ದೂರು ಸಲ್ಲಿಸಲು ತೆರಳಿದ್ದಾಗ ಕರ್ಕಶ ಶಬ್ದಕ್ಕೆ ದಾಂಧಲೆಯಾಗಿದೆ ಎಂದು ನಮೂದಿಸಿಕೊಂಡಿದ್ದಾರೆ. ನನ್ನೊಂದಿಗೆ ಮುಕೇಶ್‌ರನ್ನು ಹಲಸೂರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಹೊಸ ಎಫ್‌ಐಆರ್ ದಾಖಲಿಸಲಾಗಿದ್ದು, ಹಲ್ಲೆಯ ನೈಜ ಕಾರಣ ಹನುಮಾನ್ ಚಾಲೀಸಾ ಎಂದು ವಿವರಿಸಲಾಗಿದೆ. ತಪ್ಪಿತಸ್ಥರ ಶೀಘ್ರ ಬಂಧನವಾಗಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಕಬ್ಬನ್‌ ಪೇಟೆಯ ನಿವಾಸಿ ಮುಖೇಶ್, ಜುಮ್ಮಾ ಮಸೀದಿ ರಸ್ತೆಯಲ್ಲಿ ಕೃಷ್ಣ ಟೆಲಿಕಾಂ ಮಳಿಗೆ ಇಟ್ಟುಕೊಂಡಿದ್ದಾರೆ. ಮೊಬೈಲ್ ಬಿಡಿ ಭಾಗ, ಧ್ವನಿವರ್ಧಕ ಹಾಗೂ ಇತರೆ ವಸ್ತುಗಳನ್ನು ಮಾರುತ್ತಾರೆ. ಭಾನುವಾರ ಅವರ ಮೇಲೆ ಕೆಲ ಯುವಕರು ಹಲ್ಲೆ ಮಾಡಿದ್ದರು. ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸ್, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT