ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದು ಕೋರಿ ಪ್ರೊ.ಶರತ್ ಅನಂತಮೂರ್ತಿ ಮತ್ತು ಡಾ.ಜಿ. ವೆಂಕಟೇಶ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಈ ಕುರಿತಂತೆ ಆದೇಶಿಸಿದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000ರ ಮತ್ತು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ-20018ರ ನಿಯಮಗಳ ಅನುಸಾರ ಮೈಸೂರು ವಿವಿ ಕುಲಪತಿ ಹುದ್ದೆಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.

ಲೋಕನಾಥ್ ಅವರನ್ನು ಮೈಸೂರು ವಿವಿ ಕುಲಪತಿ ಹುದ್ದೆಗೆ ನೇಮಕ ಮಾಡುವ ವೇಳೆ ನಿಯಮಾವಳಿಗಳನ್ನು ಸೂಕ್ತವಾಗಿ ಪಾಲನೆ ಮಾಡಿಲ್ಲ. ಇದರಿಂದ ಅವರ ನೇಮಕಾತಿಯನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದ್ದು, ರಾಜ್ಯ ಸರ್ಕಾರವು ಮೈಸೂರು ವಿವಿ ಕುಲಪತಿ ನೇಮಕ ಪ್ರಕ್ರಿಯೆಯನ್ನು ಹೊಸದಾಗಿ ಮಾಡಬೇಕು. ಅದಕ್ಕಾಗಿ ಹಿಂದಿನ ಶೋಧನಾ ಸಮಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಕುಲಪತಿ ಹುದ್ದೆಗೆ ಅರ್ಹರಾದವರ ಮೂವರು ಹೆಸರು ಸೂಚಿಸಲು ಹೊಸದಾಗಿ ಶೋಧನಾ ಸಮಿತಿಯನ್ನು ರಚನೆ ಮಾಡಬೇಕು. ಲೋಕನಾಥ್ ಅವರ ಅರ್ಜಿ ಸೇರಿದಂತೆ ಎಲ್ಲಾ ಅರ್ಹರ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಬೇಕು. ನಂತರ ಅರ್ಹರ ಹೆಸರನ್ನು ರಾಜ್ಯ ಸರ್ಕಾರಕ್ಕೆ ರವಾನಿಸಬೇಕು ಎಂದು ಸೂಚಿಸಿದೆ.

ಸಮಿತಿಯು ಶಿಫಾರಸು ಮಾಡಿದ ಮೂವರು ಅರ್ಹರ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಬಳಿಕ, ರಾಜ್ಯಪಾಲರು ಆ ಮೂವರ ಹೆಸರಲ್ಲಿ ಒಬ್ಬರ ಹೆಸರು ಅಂತಿಮಗೊಳಿಸಿ, ರಾಜ್ಯ ಸರ್ಕಾರದಿಂದ ಒಪ್ಪಿಗೆ ಪಡೆದ ನಂತರ ಕುಲಪತಿ ಹುದ್ದೆಗೆ ತಮ್ಮ ನಾಮಿನಿಯನ್ನು ನೇಮಕ ಪ್ರಕ್ರಿಯೆಯನ್ನು ಹೊಸದಾಗಿ ಮಾಡಬೇಕು. ಅದಕ್ಕಾಗಿ ಹಿಂದಿನ ಶೋಧನಾ ಸಮಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಕುಲಪತಿ ಹುದ್ದೆಗೆ ಅರ್ಹರಾದವರ ಮೂವರು ಹೆಸರು ಸೂಚಿಸಲು ಹೊಸದಾಗಿ ಶೋಧನಾ ಸಮಿತಿಯನ್ನು ರಚನೆ ಮಾಡಬೇಕು. ಲೋಕನಾಥ್ ಅವರ ಅರ್ಜಿ ಸೇರಿದಂತೆ ಎಲ್ಲಾ ಅರ್ಹರ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಬೇಕು. ನಂತರ ಅರ್ಹರ ಹೆಸರನ್ನು ರಾಜ್ಯ ಸರ್ಕಾರಕ್ಕೆ ರವಾನಿಸಬೇಕು ಎಂದು ತಿಳಿಸಿದೆ.

ಪ್ರಕರಣವೇನು?

ಕುಲಪತಿಯಾಗಿ ನೇಮಕವಾಗುವವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ಬಾಕಿ ಇರಬಾರದು. ಆದರೆ ಕುಲಪತಿಯಾಗಿ ನೇಮಕಗೊಂಡಿರುವ ಲೋಕನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಆದರೆ ಆ ವಿಷಯವನ್ನು ಅವರು ಮರೆಮಾಚಿದ್ದಾರೆ. ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಹಾಗೂ ನಿಯಮಗಳನ್ನು ಗಾಳಿಗೆ ತೂರಿ ಲೋಕನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.