ಬೆಂಗಳೂರು: ಕೆ.ಪಿ. ಅಗ್ರಹಾರ ಬಳಿಯ ಟೆಲಿಕಾಂ ಬಡಾವಣೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ ಮದನ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ಮದನ್‌ಕುಮಾರ್, ಮೆಕ್ಯಾನಿಕಲ್ ಎಂಜಿನಿಯರ್. ಈತನಿಂದ ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ₹30 ಸಾವಿರ ಮೌಲ್ಯದ ಬೆಳ್ಳಿ ಸಾಮಗ್ರಿ ಹಾಗೂ ₹1.35 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅಲ್ಯೂಮಿನಿಯಂ ಕಾರ್ಖಾನೆ ಆರಂಭಿಸಿದ್ದ ಮದನ್‌ಕುಮಾರ್, ಆರ್ಥಿಕವಾಗಿ ಬೆಳೆದಿದ್ದ. ಆದರೆ, ಇತ್ತೀಚೆಗೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕಾರ್ಖಾನೆ ವಸ್ತುಗಳು ಬೆಂಕಿಯಿಂದ ಸುಟ್ಟು ಹೋಗಿದ್ದವು. ಇದರಿಂದಾಗಿ ಮದನ್, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ವಿಮೆ ಕಂಪನಿಯಿಂದಲೂ ಹೆಚ್ಚು ಹಣ ಬಂದಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಕಾರ್ಖಾನೆ ನಿರ್ವಹಣೆಗೆಂದು ಮದನ್ ಅವರು ಹೆಚ್ಚು ಸಾಲ ಮಾಡಿದ್ದ. ಬೆಂಕಿ ಅವಘಡ ನಂತರ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸಲು ಹಣ ಹೊಂದಿಸುವುದಕ್ಕಾಗಿ ಮದನ್ ಕುಮಾರ್ ಕಳ್ಳತನಕ್ಕೆ ಸಂಚು ರೂಪಿಸಿದ್ದ’ ಎಂದು ಮೂಲಗಳು ಹೇಳಿವೆ.

‘ಮನೆಯಲ್ಲಿ ಕಳ್ಳತನ ಮಾಡುವುದು ಹೇಗೆ? ಎಂಬುದನ್ನು ಯೂಟ್ಯೂಬ್‌ನಲ್ಲಿ ವಿಡಿಯೊ ನೋಡಿ ಮದನ್ ತಿಳಿದುಕೊಂಡಿದ್ದ. ಟೆಲಿಕಾಂ ಬಡಾವಣೆಯ 6ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದಕ್ಕೆ ಹೋಗಿದ್ದ ಆರೋಪಿ, ಕಟರ್‌ನಿಂದ ಬಾಗಿಲು ಕೊರೆದು ಒಳಗೆ ನುಗ್ಗಿದ್ದ. ಕೈಗವಸು ಧರಿಸಿದ್ದ. ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕದ್ದುಕೊಂಡು ಪರಾರಿಯಾಗಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.