ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

Published : 28 ಮಾರ್ಚ್ 2024, 14:15 IST
Last Updated : 28 ಮಾರ್ಚ್ 2024, 14:15 IST
ಫಾಲೋ ಮಾಡಿ
Comments

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.

‘ಮಾರ್ಚ್‌ 1ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ’ ಎಂದು ಎನ್‌ಐಎ ಮೂಲಗಳು ಹೇಳಿವೆ.

‘18 ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಮುಜಾಮಿಲ್ ಶರೀ‌ಫ್, ಪ್ರಮುಖ ಶಂಕಿತರಿಗೆ ಸಹಾಯ ಮಾಡಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ, ಈತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT