ಬೆಂಗಳೂರು: ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಕೊತ್ತನೂರು ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, 2.5 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೀದರ್ ಜಿಲ್ಲೆ ಬಾಲ್ಕಿ ತಾಲ್ಲೂಕಿನ ಈಶ್ವರ್ (20) ಥಣಿಸಂದ್ರ ಮುಖ್ಯರಸ್ತೆಯ ಹಜ್ ಭವನದ ಪಕ್ಕ ಸೋಮವಾರ ರಾತ್ರಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಆತನನ್ನು ಬಂಧಿಸಿ ₹1 ಲಕ್ಷ ಮೌಲ್ಯದ ಗಾಂಜಾ, ಕಾಲೇಜು ಬ್ಯಾಗ್ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ವಿದ್ಯಾರ್ಥಿಗೆ ಗಾಂಜಾ ಪೂರೈಸುತ್ತಿದ್ದವರ ಪತ್ತೆಗೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.