ಬೆಂಗಳೂರು: ನಗರದ ಪ್ರಮುಖ ಹೋಟೆಲ್ ತಾಜ್ ವೆಸ್ಟ್ ಎಂಡ್ಗೆ ಇ–ಮೇಲ್ ಮೂಲಕ ಇಂದು (ಶನಿವಾರ) ಬಾಂಬ್ ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಸಂದೇಶ ಕಳುಹಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಬೆದರಿಕೆ ಸಂದೇಶ ಗಮನಿಸಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿದ್ದಾರೆ.
'ಬೆಂಗಳೂರಿನಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಅಪರಿಚಿತ ದುಷ್ಕರ್ಮಿಗಳು ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ' ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ತಿಳಿಸಿದ್ದಾರೆ.