ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಸ್ವಾಭಿಮಾನ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ನಿಗಮದ ಹಣ ವರ್ಗಾವಣೆ ಮಾಡಲು ಉತ್ತೇಜಿಸಿದವರು, ಹಣ ವರ್ಗಾವಣೆ ಮಾಡಿದವರು, ಹಣ ವರ್ಗಾವಣೆ ಆಗಿರುವ ಸಂಸ್ಥೆಯ ಮಾಲೀಕರನ್ನು ಬಂಧಿಸಿ, ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡಬೇಕು. ವಾಲ್ಮೀಕಿ ನಿಗಮಕ್ಕೆ ಕೂಡಲೇ ₹187 ಕೋಟಿ ವಿಶೇಷ ಅನುದಾನ ಒದಗಿಸಬೇಕು. ಸರ್ಕಾರವು ಸಮುದಾಯದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ನಿಗಮದಲ್ಲಿ ಹಿಂದೆ ಕೆಲಸ ಮಾಡಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಭ್ರಷ್ಟಾಚಾರ ಹಾಗೂ ಶೇಕಡವಾರು ಕಮಿಷನ್ ವ್ಯವಹಾರದ ಕಾರಣದಿಂದ ನನೆಗುದಿಗೆ ಬಿದ್ದಿರುವ, ಕೊಳವೆಬಾವಿ ಮತ್ತು ಭೂ ಒಡೆತನ ಯೋಜನೆಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿ, ಸಕಾಲಕ್ಕೆ ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಸುಳ್ಳು ಜಾತಿ ಪ್ರಮಾಣಪತ್ರಗಳ ವಿತರಣೆ ಹಾವಳಿಯಿಂದ ಪರಿಶಿಷ್ಟ ಸಮುದಾಯದವರಿಗೆ ಸಮಸ್ಯೆ ಆಗುತ್ತಿದೆ. ಸುಳ್ಳು ಪ್ರಮಾಣಪತ್ರ ವಿತರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.