ಬೆಂಗಳೂರು: ‘ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ನಗರದಲ್ಲಿ ಪೊಲೀಸ್ ಸಿಬ್ಬಂದಿಯ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಇರುವ ಸಿಬ್ಬಂದಿಯ ಮೇಲೆ ಕೆಲಸದೊತ್ತಡ ಹೆಚ್ಚಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಹೇಳಿದರು.
ಬೆಂಗಳೂರು ವಕೀಲರ ಸಂಘ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ನಗರದಲ್ಲಿ ಅಪರಾಧ ಮತ್ತು ಸಂಚಾರ ನಿರ್ವಹಣೆ’ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ನಗರದಲ್ಲಿ ಒಂದು ಲಕ್ಷ ಜನಸಂಖ್ಯೆಗೆ 140 ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಗರದಲ್ಲಿ ಸದ್ಯ 7,582 ಮಂದಿ ಸಿವಿಲ್ ಪೊಲೀಸರು ಹಾಗೂ 2,508 ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ನಗರಕ್ಕೆ ಇನ್ನೂ 2,393 ಸಿಬ್ಬಂದಿ ಕೊರತೆ ಇದೆ. ಸಿಬ್ಬಂದಿ ಕೊರತೆಯ ನಡುವೆಯೂ ನಗರ ಪೊಲೀಸ್ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.

‘ಒಂದು ತಿಂಗಳಿಗೆ ಸುಮಾರು 19 ಸಾವಿರ ಪಾಸ್ಪೋರ್ಟ್ ಅರ್ಜಿಗಳಿಗೆ ಸಂಬಂಧಿಸಿದ ತಪಾಸಣೆ ಕಾರ್ಯ ನಡೆಸಬೇಕಾಗುತ್ತದೆ. ಸಿಬ್ಬಂದಿಯ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. ಸಿಬ್ಬಂದಿ ಸುಮಾರು 16 ಗಂಟೆಗಳಷ್ಟು ಕೆಲಸ ಮಾಡಬೇಕಾದ ಪರಿಸ್ಥಿತಿ ಇದೆ. ಕೆಲಸದೊತ್ತಡದ ಕಾರಣದಿಂದ ನಗರದ ಶೇ 30ರಷ್ಟು ಸಿಬ್ಬಂದಿಗೆ ಮಧುಮೇಹ ಹಾಗೂ ರಕ್ತದೊತ್ತಡದ ಸಮಸ್ಯೆ ಉಂಟಾಗಿದೆ’ ಎಂದು ತಿಳಿಸಿದರು.

‘ಸಮಾಜ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತವೆ. ಕಾಲ ಕಳೆದಂತೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ಹಿಂದೆ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ಕಡಿಮೆಯಾಗಿದ್ದವು. ಆದರೆ, ಇಂದು ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಕನಿಷ್ಠ 15 ದೂರುಗಳು ಪ್ರತಿದಿನ ಮಹಿಳಾ ಸಹಾಯವಾಣಿಯಲ್ಲಿ ದಾಖಲಾಗುತ್ತಿವೆ’ ಎಂದರು.

‘ನಗರದ ರಸ್ತೆಗಳು ಕಿರಿದಾಗಿದ್ದು, ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದು ಸಂಚಾರ ಸಮಸ್ಯೆಗೆ ಮುಖ್ಯ ಕಾರಣ. ಕನಿಷ್ಠ ಒಂದು ಕಿ.ಮೀವರೆಗೆ ರಸ್ತೆಯ ವಿಭಜಕಗಳನ್ನು ಒಡೆಯದೇ ಇದ್ದರೆ ಸಂಚಾರ ಸಮಸ್ಯೆಯನ್ನು ತಗ್ಗಿಸಲು ಸಾಧ್ಯವಿದೆ. ಆದರೆ ನಗರದಲ್ಲಿ ಅವೈಜ್ಞಾನಿಕವಾಗಿ ರಸ್ತೆ ವಿಭಜಕಗಳನ್ನು ಒಡೆಯಲಾಗಿದೆ. ಹೀಗಾಗಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಹೆಚ್ಚುತ್ತಿರುವ ವಾಹನಗಳಿಂದ ವಾಹನ ನಿಲುಗಡೆಯ ಸಮಸ್ಯೆಯೂ ಹೆಚ್ಚಾಗುತ್ತಿದೆ’ ಎಂದು ಹೇಳಿದರು.

‘ಅಡ್ಡರಸ್ತೆಗಳು ಮುಖ್ಯರಸ್ತೆಗೆ ಕೂಡುವ ಕಡೆಗಳಲ್ಲಿ ರಸ್ತೆ ಉಬ್ಬುಗಳನ್ನು ಹಾಕಬೇಕು. ಆದರೆ, ನಗರದಲ್ಲಿ ಮುಖ್ಯರಸ್ತೆಗಳಿಗೇ ರಸ್ತೆ ಉಬ್ಬುಗಳನ್ನು ಹಾಕಲಾಗಿದೆ. ನಗರದ ರಸ್ತೆಗಳಲ್ಲಿರುವ ಗುಂಡಿಗಳೂ ಸಂಚಾರ ದಟ್ಟಣೆ ಉಂಟಾಗಲು ಕಾರಣ. ‘ನಮ್ಮ ಮೆಟ್ರೊ’ ಕಾಮಗಾರಿಯಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆ ತಾತ್ಕಾಲಿಕ. ಭವಿಷ್ಯದಲ್ಲಿ ಮೆಟ್ರೊದಿಂದ ಸಂಚಾರ ಸಮಸ್ಯೆ ತಗ್ಗಲಿದೆ’ ಎಂದು ತಿಳಿಸಿದರು.

‘ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ದಂಡ ವಿಧಿಸುವ ಬಗ್ಗೆ ಸರ್ಕಾರ ನಿಯಮ ರೂಪಿಸಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸಂಚಾರ ಪೊಲೀಸರು ಲಂಚ ಪಡೆಯುತ್ತಾರೆ ಎಂಬ ಆರೋಪಗಳು ಹೆಚ್ಚಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಸಾಮಾನ್ಯ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಿದೆ’ ಎಂದರು.

ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಪ್ರಣವ್ ಮೊಹಂತಿ ಮಾತನಾಡಿ, ‘ನಗರದಲ್ಲಿ ಅಪರಾಧ ಸಂಖ್ಯೆ ಇಳಿಮುಖವಾಗುತ್ತಿದೆ. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ‘ಅಭಯ’ ಮಹಿಳಾ ಅಪರಾಧ ತಡೆ ತಂಡಗಳು ಮಹಿಳೆಯರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.

‘ಈ ವರ್ಷದ ಏಪ್ರಿಲ್ ತಿಂಗಳವರೆಗೆ ಮಹಿಳಾ ಸಹಾಯವಾಣಿ– 1091ಗೆ 522 ದೂರುಗಳು ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಬೆಂಗಳೂರನ್ನು ಅಪರಾಧ ಮುಕ್ತ ಸುರಕ್ಷಿತ ನಗರವಾಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾತನಾಡಿ, ‘ನಗರದ ಸುಮಾರು 50 ಲಕ್ಷ ವಾಹನಗಳ ಪೈಕಿ 6 ಸಾವಿರಕ್ಕೂ ಹೆಚ್ಚು ಬಿಎಂಟಿಸಿ ಬಸ್ಗಳಿವೆ. ಪ್ರತಿದಿನ ನಗರಕ್ಕೆ ಸುಮಾರು 700 ವಾಹನಗಳು ಬಂದು ಹೋಗುತ್ತವೆ. ನಗರದ 11 ಸಾವಿರ ಕಿ.ಮೀ ಉದ್ದದ ರಸ್ತೆಗಳ ನಿರ್ವಹಣೆ ಸರಿಯಾಗಿಲ್ಲದೇ ಇರುವುದು ಸಂಚಾರ ಸಮಸ್ಯೆಗೆ ಮುಖ್ಯ ಕಾರಣ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಈ ವರ್ಷ ₨ 34 ಕೋಟಿ ದಂಡ ವಸೂಲಿ ಮಾಡಲಾಗಿದೆ’ ಎಂದರು.

‘ನಗರದ ಬಸವೇಶ್ವರ ವೃತ್ತ, ರಮಣ ಮಹರ್ಷಿ ರಸ್ತೆ, ಹಡ್ಸನ್ ವೃತ್ತ, ಸಿಲ್ಕ್ಬೋರ್ಡ್ ಜಂಕ್ಷನ್, ಬನ್ನೇರುಘಟ್ಟ ರಸ್ತೆ, ಕೆ.ಆರ್.ಪುರ, ಹಳೇ ಮದ್ರಾಸು ರಸ್ತೆ, ನಾಗವಾರ ಜಂಕ್ಷನ್ ಹಾಗೂ ಹೆಬ್ಬಾಳ ಜಂಕ್ಷನ್ನಲ್ಲಿ ಹೆಚ್ಚು ವಾಹನ ದಟ್ಟಣೆ ಉಂಟಾಗುತ್ತದೆ. ಈ ಜಂಕ್ಷನ್ಗಳಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಯೋಜನೆ ರೂಪಿಸಬೇಕು’ ಎಂದು ಹೇಳಿದರು.

ಸಹಾಯಕ್ಕೆ ಗೃಹ ರಕ್ಷಕರನ್ನು ನೀಡಿ
‘ಬೀಟ್ ಹಾಗೂ ಸಂಚಾರ ನಿರ್ವಹಣೆ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಇರುವುದರಿಂದ ಈ ಕೊರತೆಯನ್ನು ತಾತ್ಕಾಲಿಕವಾಗಿ ತುಂಬಲು ಸರ್ಕಾರ 2 ಸಾವಿರ ಗೃಹ ರಕ್ಷಕರನ್ನು ಪೊಲೀಸರ ಸಹಾಯಕ್ಕೆ ನೇಮಿಸಬೇಕು. ಇದರಿಂದ ಸಿಬ್ಬಂದಿ ಮೇಲಿನ ಕೆಲಸದೊತ್ತಡ ತಗ್ಗಲಿದೆ’ –ರಾಘವೇಂದ್ರ ಔರಾದಕರ್, ನಗರ ಪೊಲೀಸ್ ಕಮಿಷನರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.