ಔರಾದ್: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಶೇ 95ರಷ್ಟು ಜನರಿಗೆ ತಲುಪಿದೆ’ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

‘ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ. ಇದು ಅವರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ. ಇಡೀ ದೇಶದಲ್ಲೇ ಈ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ’ ಎಂದು ಹೇಳಿದರು.

‘ಗ್ಯಾರಂಟಿ ಯೋಜನೆಗಳ ಲಾಭದಿಂದ ದೂರ ಉಳಿದವರನ್ನು ಗುರುತಿಸಬೇಕು. ಅವರ ಮನೆಗೆ ಹೋಗಿ ಏನೇನು ದಾಖಲೆ ಬೇಕು ಪಡೆದು ಅವರಿಗೆ ಯೋಜನೆ ಲಾಭ ಕೊಡಿಸಬೇಕು. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜತೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಸರ್ಕಾರದ ಎಲ್ಲ ಯೋಜನೆಗಳು ಅರ್ಹರಿಗೆ ತಲುಪಬೇಕು. ರಸ್ತೆ, ಕುಡಿಯುವ ನೀರು ಹಾಗೂ ಇತರೆ ಮೂಲ ಸೌಲಭ್ಯ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚೆನ್ನಪ್ಪ ಉಪ್ಪೆ ಮಾತನಾಡಿ ‘ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಪದೇ ಪದೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಯಾವುದೇ ಕೆಲಸಕ್ಕೆ ಜನ ಕಚೇರಿಗೆ ಬಂದಾಗ ಅಧಿಕಾರಿಗಳು ಅವರನ್ನು ಸ್ಪಂದಿಸಬೇಕು’ ಎಂದರು.

ತಾ.ಪಂ.ಇಒ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಪಕ್ಷದ ಹಿರಿಯ ಮುಖಂಡ ಭೀಮಸೇನರಾವ ಸಿಂಧೆ, ಬಾಳಾಸಾಹೇಬ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಆನಂದ ಚವಾಣ್, ರಾಮಣ್ಣ ವಡೆಯರ್, ಸುಧಾಕರ್ ಕೊಳ್ಳೂರ್, ಡಾ. ಫಯಾಜ್, ದತ್ತು ಬಾಪುರೆ, ಡಿ.ಕೆ. ಚಂದು, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಾಜಕುಮಾರ ಕಂದಗೂಳೆ, ವಿಷ್ಣು ಗುಡಪಳ್ಳಿ, ದತ್ತು ಉಜನಿ, ಶಿವಕುಮಾರ ಪಾಟೀಲ, ಚೆನ್ನಬಸಪ್ಪ ಬಿರಾದಾರ, ಸಲ್ಲಾವುದ್ದಿನ್ ಹಾಜರಿದ್ದರು.

ಅಲೆಮಾರಿಗಳಿಗೆ ನಿವೇಶನ ಹಂಚಿಕೆಗೆ ಸೂಚನೆ

ಔರಾದ್: ಪಟ್ಟಣದಲ್ಲಿ ವಾಸವಿರುವ ಅಲೆಮಾರಿ ಜನರಿಗೆ ಈಗಾಗಲೇ ಮಂಜೂರಾಗಿರುವ ಎರಡು ಎಕರೆ ಜಾಗದಲ್ಲಿ ಮನೆ ಹಂಚಿಕೆ ಮಾಡುವಂತೆ ಸಂಸದ ಸಾಗರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಶುಕ್ರವಾರ ಅಲೆಮಾರಿಗಳ ಸಮಸ್ಯೆ ಆಲಿಸಿದ ಅವರು ಮೊದಲು ಎರಡು ಎಕರೆ ಜಾಗದಲ್ಲಿ ಎಷ್ಟು ಜನರಿಗೆ ಸಾಧ್ಯವೋ ಅಷ್ಟು ಜನರಿಗೆ ಮನೆ ಕೊಡಿ. ಇನ್ನೂ ಭೂಮಿ ಕಡಿಮೆ ಬಿದ್ದರೆ ಮತ್ತೆ ಹೆಚ್ಚುವರಿ ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ತಿಳಿಸುವುದಾಗಿ ಹೇಳಿದರು.

ಬೀದರ್-ನಾಂದೇಡ್ ಹೊಸ ರೈಲು ಮಾರ್ಗ ಕಾಮಗಾರಿ ಬಗ್ಗೆಯೂ ಪ್ರಯತ್ನ ನಡೆದಿದೆ. ಬೀದರ್-ಔರಾದ್ ಹೆದ್ದಾರಿ ಕಾಮಗಾರಿ ಬಗ್ಗೆ ಬಂದಿರುವ ದೂರುಗಳ ಬಗ್ಗೆ ಮಾಹಿತಿ ನೀಡಲು ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದ್ದೇನೆ. ಮಳೆ ಹಾನಿ ಸರ್ವೆ ಆಗಿದೆ. ಶೀಘ್ರ ಪರಿಹಾರವೂ ಸಿಗಲಿದೆ ಎಂದು ಸಂಸದ ಸಾಗರ್ ಖಂಡ್ರೆ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.