ಬಸವಕಲ್ಯಾಣ (ಬೀದರ್ ಜಿಲ್ಲೆ): ‘ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದೊಡ್ಡ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ, ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳೇ ಕಾರಣ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.
.Karnataka Bypoll Results ಗ್ಯಾರಂಟಿ, ಅಭಿವೃದ್ಧಿಯ ಗೆಲುವು: ಡಿ.ಕೆ.ಶಿವಕುಮಾರ್.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ನಡೆದ ಈ ಉಪ ಚುನಾವಣೆಯಲ್ಲಿ ಅಭಿವೃದ್ಧಿಗೆ ಒಲವು, ಗ್ಯಾರಂಟಿಗಳಿಗೆ ಗೆಲುವು ನೀಡಿರುವ ಮತದಾರರಿಗೆ ಧನ್ಯವಾದ ಅರ್ಪಿಸುವೆ ಎಂದರು.

ಶಿಗ್ಗಾವಿಯಲ್ಲಿ ವಚನಭ್ರಷ್ಟರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಆ ಕ್ಷೇತ್ರದ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿರುವ ನಾನು ಮತದಾರರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.
.Karnataka bypoll result | ಈ ಗೆಲುವು ದಿಗ್ವಿಜಯದ ಮುನ್ಸೂಚನೆ: ಸಿದ್ದರಾಮಯ್ಯ.
ಕಾಂಗ್ರೆಸ್ ಪಕ್ಷದ ನಾಯಕರು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮೂರೂ ಉಪ ಚುನಾವಣೆಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಎಲ್ಲರ ಸಂಘಟಿತ ಪ್ರಯತ್ನಕ್ಕೆ ಈ ಗೆಲುವಿನ ಹಾರ ಸಂದಿದೆ. ಉತ್ತಮ ನಾಯಕತ್ವ ನೀಡಿ ಮಾರ್ಗದರ್ಶನ ಮಾಡಿದ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಲ್ಲ ಕಾಂಗ್ರೆಸ್ ಸಚಿವರು, ಶಾಸಕರಿಗೆ ಈ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯವಾಗಿದೆ. ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ, ನಮ್ಮ ಜನಪರ ಕಾರ್ಯಕ್ರಮ ಮುಂದಿಟ್ಟು ಚುನಾವಣೆಗೆ ಹೋಗಿದ್ದೇವು. ಜನ ಬೆಂಬಲ ನೀಡಿದ್ದಾರೆ. ಈಗಲಾದರೂ ಪ್ರತಿಪಕ್ಷಗಳು ಎಚ್ಚೆತ್ತು, ರಾಜಕೀಯ ಮತ್ತು ಅಪಪ್ರಚಾರ ಬಿಟ್ಟು, ರಾಜ್ಯದ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸಬೇಕು.
.Karnataka Bypoll Results | ಮಾಜಿ ಸಿಎಂ ಪುತ್ರರಿಗೆ ಸೋಲು: ಮೂರೂ ಕ್ಷೇತ್ರಗಳಲ್ಲಿ ‘ಕೈ’ ಜಯಭೇರಿ.
‘ಮಹಾರಾಷ್ಟ್ರದಲ್ಲಿ ಹಣದ ಹೊಳೆ’

‘ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಅಲ್ಲಿನ ಮತದಾರರು ಒಲವು ತೋರಿದ್ದಾರೆ. ಆದರೆ, ಮಹಾರಾಷ್ಟ್ರದ ಫಲಿತಾಂಶ ಅನಿರೀಕ್ಷಿತ ಮತ್ತು ಆಘಾತಕಾರಿಯಾಗಿದೆ. ಬಿಜೆಪಿ ಮತ್ತು ಮಹಾಯುತಿ ಹಣದ ಹೊಳೆಯನ್ನೇ ಹರಿಸಿತು. ಅಧಿಕಾರದ ದುರ್ಬಳಕೆ ಮಾಡಿಕೊಂಡು ಈ ಚುನಾವಣೆ ಗೆದ್ದಿದೆ’ ಎಂದು ಸಚಿವ ಈಶ್ವರ ಬಿ. ಖಂಡ್ರೆ ಆರೋಪಿಸಿದರು.
.Channapatna Bypoll: ಬೊಂಬೆ ನಾಡಿಗೆ ಯೋಗೇಶ್ವರ; ಸೋಲಿನ ಚಕ್ರವ್ಯೂಹದಲ್ಲಿ ನಿಖಿಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.