ಬೀದರ್: ‘ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಔರಾದ್ನಲ್ಲಿ ಏರ್ಪಡಿಸಿರುವ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ನಗರದ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಗುರುವಾರ ಬಂದಿಳಿದ ಅವರು ಅಲ್ಲಿಗೆ ತೆರಳುವುದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು.

ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದರು.

ಮೋದಿ ಮಹಾ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸುದ್ದಿಗಾರರು ಗಮನ ಸೆಳೆದಾಗ, ಅವರು ಏನು ಬೇಕಾದರೂ ಮಾತಾಡಲಿ ಅದಕ್ಕೆ ನಾನು ಉತ್ತರ ಕೊಡೊಲ್ಲ ಎಂದು ಹೇಳಿ ಹೊರಟರು.

ಇತ್ತೀಚೆಗೆ ನಿಧನರಾದ ಬಿಜೆಪಿಯ ಮಾಜಿಶಾಸಕ ರಮೇಶಕುಮಾರ ಪಾಂಡೆ ಅವರ ಮನೆಗೆ ಯಡಿಯೂರಪ್ಪ ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.