ಬೀದರ್: ಬೀದರ್ ಹಾಗೂ ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹಿಸಿದೆ.

ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ, ಪ್ರಧಾನ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಅವರು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

‘ಸ್ಟಾರ್ ಏರ್’ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ವಿಮಾನ ಸೇವೆ ಸ್ಥಗಿತಗೊಂಡಿದೆ. ಪ್ರಯಾಣಿಕರ ಕೊರತೆಯೂ ಇದಕ್ಕೆ ಕಾರಣ ಕೊಡಲಾಗಿದೆ. ಆದರೆ, ವಿಮಾನ ಸಮಯಕ್ಕೆ ಸರಿಯಾಗಿ ಹಾರಾಡದಿರುವುದು, ಪದೇ ಪದೇ ಕೊನೆಯ ಗಳಿಗೆಯಲ್ಲಿ ರದ್ದಾಗುತ್ತಿದ್ದ ಕಾರಣ ಪ್ರಯಾಣಿಕರು ಒಲವು ತೋರಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಸಮಯ ನಿಗದಿಪಡಿಸಿ ಬೀದರ್–ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸುವ ಅಗತ್ಯವಿದೆ. ಹೀಗೆ ಮಾಡುವುದರಿಂದ ಸಂಸ್ಥೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.