ಬೀದರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ (ಬ್ರಿಮ್ಸ್) ಕಸದ ತೊಟ್ಟಿಯಲ್ಲಿ ಬಿಟ್ಟು ಹೋಗಿದ್ದ ಎರಡು ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ.

ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ. ಬ್ರಿಮ್ಸ್ ಸಿಬ್ಬಂದಿ ಗಮನಿಸಿ, ನವಜಾತ ಶಿಶುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಉಪಚರಿಸಿದ್ದಾರೆ. ಒಂದು ಮಗು ಎರಡು ದಿನಗಳ ಹಿಂದೆ ಹುಟ್ಟಿದರೆ, ಇನ್ನೊಂದು ಮಗು ಎರಡು ತಿಂಗಳದ್ದು ಇರಬಹುದು ಎಂದು ಅಂದಾಜಿಸಲಾಗಿದೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ನವಜಾತ ಶಿಶುಗಳನ್ನು ಭಾಲ್ಕಿ ಹಿರೇಮಠ ಸಂಸ್ಥಾನಕ್ಕೆ ಒಪ್ಪಿಸಲಾಗಿದೆ. ಬ್ರಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಶಕುಂತಲಾ ಕೌಜಲಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಹೇಶ ಬಿರಾದಾರ ಅವರ ಸಮ್ಮುಖದಲ್ಲಿ ಮಕ್ಕಳನ್ನು ಮಂಗಳವಾರ ಮಠದ ಸುಪರ್ದಿಗೆ ಒಪ್ಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.