ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ: ತಹಸೀಲ್ದಾರ್ ಟಿ.ರಮೇಶ್

ಗುಂಡ್ಲುಪೇಟೆಗೆ ಆಗಮಿಸಿದ ‘ಕರ್ನಾಟಕ ಸಂಭ್ರಮ–50’ ರಥಯಾತ್ರೆಗೆ ಸ್ವಾಗತ
Published : 29 ಆಗಸ್ಟ್ 2024, 14:06 IST
Last Updated : 29 ಆಗಸ್ಟ್ 2024, 14:06 IST
ಫಾಲೋ ಮಾಡಿ
Comments

ಗುಂಡ್ಲುಪೇಟೆ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ತಾಲ್ಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಹಸೀಲ್ದಾರ್ ಟಿ.ರಮೇಶ್ ಬಾಬು ಸ್ವಾಗತ ಕೋರಿ ಪುಷ್ಪಾರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಭುವನೇಶ್ವರಿ ಪ್ರತಿಮೆ ಹಾಗೂ ಕರ್ನಾಟಕ ಸಂಸ್ಕೃತಿ ಬಿಂಬಿಸುವ ಕನ್ನಡ  ರಥಯಾತ್ರೆ ಆಗಮಿಸಿದ ವೇಳೆ ತಾಲ್ಲೂಕು ಆಡಳಿತ, ಪುರಸಭೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳಿಂದ ಸ್ವಾಗತ ಕೋರಲಾಯಿತು.

ಈ ವೇಳೆ ತಹಸೀಲ್ದಾರ್ ಟಿ.ರಮೇಶ್ ಬಾಬು ಮಾತನಾಡಿ,‘1956ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾಗಿ ಮೈಸೂರು ರಾಜ್ಯ ಎಂದು ನಾಮಕಾರಣವಾಯಿತು. ತದ ನಂತರ ಡಿ.ದೇವರಾಜು ಅರಸು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 1973ರಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿ 50 ವರ್ಷ ತುಂಬಿದ ಹಿನ್ನೆಲೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ‘ಕರ್ನಾಟಕ ಸಂಭ್ರಮ’ ಎಂದು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.

‘ತಾಲ್ಲೂಕಿನ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳು, ಕೈಗಾರಿಕೋದ್ಯಮ, ವ್ಯಾಪಾರಸ್ಥರು ನಾಮಫಲಕಗಳಲ್ಲಿ   ಶೇ.60ರಷ್ಟು ಕನ್ನಡ ಬಳಕೆ ಹಾಗೂ ಇತರೆ ಭಾಷೆ ಶೇ.40ರಷ್ಟು ಮಾಡಬೇಕು. ಸರ್ಕಾರದ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಾಜ್ಯದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ನಾಡು, ನುಡಿ, ನೆಲ, ಜಲ, ಕನ್ನಡ ಭಾಷೆ ಉಳಿವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಈ ವೇಳೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸೇರಿ ಪ್ರಮುಖ ರಸ್ತೆಗಳನ್ನು ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಿತು. ಕಳಸ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ಶಾಲಾ ಬ್ಯಾಂಡ್ ಸೇರಿ ವಿವಿಧ ಕನ್ನಡ ಪರ ಸಂಘಟನೆ ಮುಖಂಡರು ಮೆರವಣಿಗೆಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ವಸಂತಕುಮಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪುರಸಭೆ ಸದಸ್ಯ ಎಚ್.ಆರ್.ರಾಜಗೋಪಾಲ್, ಶಿರಸ್ತೇದಾರ್ ಮಹೇಶ್, ಗ್ರಾಮ ಆಡಳಿತಾಧಿಕಾರಿ ಜವರೇಗೌಡ, ವಿವಿಧ ಕನ್ನಡಪರ ಸಂಘಟನೆ ಮುಖಂಡ ಸುರೇಶ್‌‌‌ನಾಯಕ, ಜಗದೀಶ್, ಎ.ಅಬ್ದುಲ್ ಮಾಲೀಕ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT