ಚಿಕ್ಕಬಳ್ಳಾಪುರ: ಗ್ರಾನೈಟ್ ಕಲ್ಲು ಗಣಿಗಾರಿಕೆಗೆ ಪರವಾನಗಿ ಪಡೆಯುವ ಸಂಬಂಧ ತಾಂತ್ರಿಕ ವರದಿ ನೀಡಲು ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಚೇತನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈ ಬಗ್ಗೆ ವಿ.ಸಂಜಯ್ ಕೃಷ್ಣ ಎಂಬುವವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ₹35 ಸಾವಿರವನ್ನು ಚೇತನ್ ಪಡೆದಿದ್ದರು. ಸೋಮವಾರ ಜಿಲ್ಲಾಡಳಿತ ಭವನದಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿಯೇ ₹25 ಸಾವಿರ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಮೋಹನ್ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.