ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.

ಮಗಳ ಕೊಲೆ ಪ್ರಕಣಕ್ಕೆ ಸಂಬಂಧಿಸಿ ತನಗೆ ಕೆಲವರಿಂದ ಜೀವ ಬೆದರಿಕೆಯಿದೆ ಎಂದು ನಿರಂಜನಯ್ಯ ಗುರುವಾರ ಹೇಳಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿಯೂ ಬೆದರಿಕೆ ಕುರಿತು ಪ್ರಸ್ತಾವಿಸಿದ್ದರು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಘಟಕ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಅವರಿಗೆ ಶಸ್ತ್ರಸಜ್ಜಿತ ಒಬ್ಬ ಅಂಗರಕ್ಷಕರನ್ನು ಭದ್ರತೆಗೆ ನಿಯೋಜಿಸಿದೆ.

ಸಾಂತ್ವನ ಹೇಳುವ ನೆಪದಲ್ಲಿ ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಮನೆಗೆ ಬಂದಿದ್ದರು. ಮಗಳು ಮಲಗುವ ಬೆಡ್‌ರೂಮ್ ವಿಡಿಯೊ ಸಹ ಮಾಡಿಕೊಂಡಿದ್ದಾರೆ. ಇದನ್ನೆಲ್ಲ ಗಮನಿಸಿದರೆ ಕುಟುಂಬದವರ ಜೀವಕ್ಕೂ ಅಪಾಯದ ಲಕ್ಷಣವಿದೆ. ಈ ಕುರಿತು ತನಿಖೆಯಾಗಬೇಕು ಎಂದು ನಿರಂಜನಯ್ಯ ಆಗ್ರಹಿಸಿದ್ದರು. ಬಿಡ್ನಾಳದಲ್ಲಿ ಇರುವ ಅವರ ನಿವಾಸಕ್ಕೂ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ 'ನಿರಂಜನಯ್ಯ ಅವರು ತಮ್ಮ ಜೀವಕ್ಕೆ ಬೆದರಿಕೆಯಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಹಾಗೂ ಅವರ ನಿವಾಸಕ್ಕೆ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ' ಎಂದರು.
.ನೇಹಾ ಕೊಲೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಶಾಸಕ ಬಸವರಾಜ ಬೊಮ್ಮಾಯಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.