ಹಾಸನ: ‘ಪೆನ್‌ಡ್ರೈವ್ ಮೂಲಕ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದ್ದು, ಪ್ರತಿ ದಿನ ಹೊಸ ಹೊಸ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ. ಇಂತಹ ಆತಂಕಕಾರಿ ಪರಿಸ್ಥಿತಿಯನ್ನು ಕೊನೆಗಾಣಿಸಬೇಕು. ಸಂತ್ರಸ್ತ ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ತಕ್ಷಣವೇ ಮುಂದಾಗಬೇಕು’ ಎಂದು ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಧರ್ಮೇಶ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಸಾವಿರಕ್ಕೂ ಹೆಚ್ಚು ವಿಡಿಯೊಗಳಿದ್ದು, ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡಿರುವುದಾಗಿ ಆ ಪಕ್ಷದ ಮುಖಂಡ ಜಿ.ದೇವರಾಜೇಗೌಡ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪೊಲೀಸರು ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿದರೆ, ವಿಡಿಯೊಗಳನ್ನು ಚಿತ್ರೀಕರಿಸಿರುವವರು ಮತ್ತು ಅವರಿಗೆ ನೀಡಿದವರ ಮಾಹಿತಿ ತಿಳಿಯುತ್ತದೆ’ ಎಂದಿದ್ದಾರೆ.

‘ನೂರಾರು ಮಹಿಳೆಯರ ಮೇಲೆ ಲೈಂಗಿಕ ಅಕ್ರಮ, ಅತ್ಯಾಚಾರ ನಡೆಸಿ, ಅವುಗಳನ್ನು ಚಿತ್ರೀಕರಿಸಿಕೊಂಡಿರುವ ವ್ಯಕ್ತಿ ಹಾಗೂ ಅವುಗಳನ್ನು ಸಾರ್ವಜನಿಕರಿಗೆ ಪೆನ್‌ಡ್ರೈವ್ ಮೂಲಕ ಹಂಚುತ್ತಿರುವ ವ್ಯಕ್ತಿಗಳನ್ನೂ ಬಂಧಿಸಬೇಕು. ಸಂತ್ರಸ್ತ ಮಹಿಳೆಯರು ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.