ಕಲಬುರಗಿ: ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಕಾರ್ಯಕರ್ತರು ಪ್ರತ್ಯೇಕವಾಗಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಗತ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಅನ್ನಪೂರ್ಣ ಕ್ರಾಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿಎಸ್ಎಸ್ ರಾಜ್ಯ ಸಂಚಾಲಕ ಡಿ.ಜಿ. ಸಾಗರ್, ‘ರಾಜ್ಯದ ರಾಜ್ಯಪಾಲರು ಸಾಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಂಡಿದ್ದಾರೆ. ಜೊತೆಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಬೆಂಬಲ ನೀಡಿದ್ದಾರೆ. ವಿಚಾರಣೆಗೆ ಅನುಮತಿ ನೀಡುವ ವೇಳೆ ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17 (ಎ) ಅಡಿ ಪಾಲಿಸಬೇಕಾಗಿರುವ ನಿಯಮಗಳನ್ನು ಉಲ್ಲಂಘಿಸಲಾಗಿದೆ. ರಾಜ್ಯಪಾಲರು ದೇಶದ ರಾಷ್ಟ್ರಪತಿಗಳ ಪ್ರತಿನಿಧಿಯಾಗಿದ್ದು, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿರುವುದು ಅಕ್ಷಮ್ಯ’ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕಿ ರೇಣುಕಾ ಸಿಂಗೆ ಮಾತನಾಡಿ, ‘ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮೊದಲ ದಿನದಿಂದಲೂ ಯತ್ನಿಸುತ್ತಿದೆ. ಇದೀಗ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರ ಕೆಡವಲು ಹುನ್ನಾರ ನಡೆಸಿದೆ. ಎಲ್ಲ ಪ್ರಜ್ಞಾವಂತ ಜನತೆ ಈ ಪ್ರಯತ್ನವನ್ನು ವಿಫಲಗೊಳಿಸಬೇಕು’ ಎಂದರು.

ಸಂಘಟನೆಯ ಮುಖಂಡ ಸುರೇಶ ಹಾದಿಮನಿ ಮಾತನಾಡಿ, 'ಸಂಘಟನೆಯ ರಾಜ್ಯ ಖಜಾಂಚಿ ಬಿ.ಸಿ. ವಾಲಿ, ಮಾರ್ಗದರ್ಶಕ ಎಸ್.ಪಿ. ಸುಳ್ಳದ, ದಲಿತ ಕಲಾ ಮಂಡಳಿ ಮುಖಂಡ ಅಂಬಣ್ಣ ಜೀವಣಗಿ, ಜಿಲ್ಲಾ ಮುಖಂಡರಾದ ಉಮೇಶ ನರೋಣಾ, ರೇವಣಸಿದ್ದ ಜಾಲಿ, ಮಲ್ಲಣ್ಣ ಕೊಡಚಿ, ಕೃಷ್ಣಪ್ಪ ಕರಣಿಕ, ಸುಭಾಷ್ ಡಾಂಗೆ, ಮಹಾದೇವ ತರನಳ್ಳಿ, ಶಿವಶರಣ ಹೊಸಮನಿ ಜೇವರ್ಗಿ, ರವಿ ಬಡಿಗೇರ ಚಿತ್ತಾಪುರ, ರತ್ನಾಕರ ಪಟ್ಟಣಕರ, ದೇವೇಂದ್ರ ದೊಡ್ಡಮನಿ, ಶಿವಪುತ್ರ ನರೋಣಾ, ಸತೀಶ ಖಣದಾಳ, ಮೈಲಾರಿ ದೊಡ್ಡಮನಿ, ಮಹಾಲಿಂಗ ಅಂಗಡಿ, ರಮೇಶ ಪಾಳಾ, ಯಶವಂತ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.