ಕೋಲಾರ: ನಗರದ ಸರ್ಕಾರಿ ಜೂನಿಯರ್ ಕಾಲೇಜು ಉಪನ್ಯಾಸಕರು ಮಂಗಳವಾರ ಬೆಳಿಗ್ಗೆ ಕಾಲೇಜಿನಲ್ಲಿ ಹೊಡೆದಾಡಿಕೊಂಡಿದ್ದಾರೆ.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರೂ ಆಗಿರುವ ನಾಗಾನಂದ ಕೆಂಪರಾಜು ಹಾಗೂ ಜೆ.ಜಿ.ನಾಗರಾಜ್ ನಡುವೆ ಜಗಳ ನಡೆದಿದೆ.

ಕನ್ನಡ ಉಪನ್ಯಾಸಕ ನಾಗರಾಜ್ ಅವರ ಮುಖ ಊದಿಕೊಂಡಿದ್ದು, ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯಶಾಸ್ತ್ರ ಉಪನ್ಯಾಸಕ ನಾಗಾನಂದ ಕೆಂಪರಾಜು ಹಲ್ಲೆ ನಡೆಸಿದರು ಎಂದು ನಾಗರಾಜ್ ಆರೋಪಿಸಿದರು.

'ಜಿಲ್ಲಾ ಕಸಪಾ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಸೋತಿದ್ದ ನಾಗಾನಂದ ನಿತ್ಯ ಹಿಂಸೆ ಕೊಡುತ್ತಿದ್ದರು. ವಾಟ್ಸ್ ಆ್ಯಪ್ ನಲ್ಲಿ ನಿತ್ಯ ಕೆಟ್ಟದಾಗಿ ಸಂದೇಶ ಕಳುಹಿಸುತ್ತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ, ಬಲವಾಗಿ ಕೆನ್ನೆಗೆ ಬಾರಿಸಿದರು' ಎಂದರು.

ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸದಾನಂದ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ಕಸಾಪ ಪದಾಧಿಕಾರಿಗಳು, ಕನ್ನಡ ಹಾಗೂ ಇತರ ಸಂಘಟನೆಗಳ ಹೋರಾಟಗಾರರ ಆಸ್ಪತ್ರೆಗೆ ಭೇಟಿ ನೀಡಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ನಾಗಾನಂದ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಮೇಲೆ ಮೊದಲು ಹಲ್ಲೆ ನಡೆಸಿದ್ದು ಜೆ.ಜಿ.ನಾಗರಾಜ್ ಎಂದು ಆರೋಪ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.