ಕೋಲಾರ: ತಾಲ್ಲೂಕಿನ ಬೆಗ್ಲಿ ಬೆಣಜೇನಹಳ್ಳಿ ಗ್ರಾಮದಲ್ಲಿ ಎಂಎಸ್ಐಲ್ ಮದ್ಯದಂಗಡಿ ಮುಚ್ಷಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮದ ಪ್ರವೇಶದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು ಕುಡಿದು ಬರುತ್ತಾರೆ. ವಿದ್ಯಾರ್ಥಿಗಳು, ಮಹಿಳೆಯರು ಆ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದ್ಯದಂಗಡಿ ಮುಚ್ಚಿಸುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

ಕೋಲಾರ ಗ್ರಾಮಾಂತರ ಇನ್ ಸ್ಪೆಕ್ಟರ್ ಕಾಂತರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.

ಮೊದಲು ಮತ ಹಾಕುವಂತೆ ಅಧಿಕಾರಿಗಳು ಮನವಿ ಮಾಡಿದರು. ಮಧ್ಯಾಹ್ನದವರೆಗೆ ಮತದಾನ ಮಾಡಿರಲಿಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.