ಕೊಪ್ಪಳ: ಕರ್ನಾಟಕ ಸುವರ್ಣ ರಾಜ್ಯೋತ್ಸವ ಸಂಭ್ರಮ ಅಂಗವಾಗಿ ನ. 2ರಂದು ಜಿಲ್ಲೆಗೆ ಜ್ಯೋತಿ ರಥಯಾತ್ರೆ ಆಗಮಿಸಲಿದ್ದು, ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ರಾಜ್ಯದಾದ್ಯಂತ ವರ್ಷಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕರ್ನಾಟಕ ಸಂಭ್ರಮ-50 ಅಂಗವಾಗಿ ವಿಜಯನಗರ ಜಿಲ್ಲೆಯಿಂದ ಹೊರಡುವ ಜ್ಯೋತಿಯಾತ್ರೆ ಗುರುವಾರ ರಾತ್ರಿ 7.30ಕ್ಕೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗೆ ಬರಲಿದ್ದು ಅಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗುವುದು ಎಂದು ತಿಳಿಸಿದರು.

ಮುನಿರಾಬಾದ್ ಗ್ರಾಮದಿಂದ ಹೊಸ ಲಿಂಗಾಪುರ, ಹೊಸಳ್ಳಿ, ಗಿಣಿಗೇರಿ, ಕೊಪ್ಪಳ, ದದೇಗಲ್, ಹಲಗೇರಿ, ಭಾನಾಪುರ, ತಳಕಲ್ ಹಾಗೂ ಬನ್ನಿಕೊಪ್ಪ ಮಾರ್ಗವಾಗಿ ಗದಗ ಜಿಲ್ಲೆಯ ಲಕ್ಕುಂಡಿಗೆ ಯಾತ್ರೆ ತೆರಳಲಿದೆ ಎಂದು ಹೇಳಿದರು.

ಸುವರ್ಣ ಸಂಭ್ರಮ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಪ್ರಾದೇಶಿಕವಾರು ಸಭೆ ಮಾಡಿದ್ದೇನೆ. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ 2024ರ ನ. 1ರ ತನಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಧ್ವಜಾರೋಹಣ ಬಳಿಕ ಪೊಲೀಸ್, ಹೋಂ ಗಾರ್ಡ್, ಎನ್ ಸಿಸಿ ಸೇರಿದಂತೆ ವಿವಿಧ ತಂಡಗಳಿಂದ ನಡೆದ ಪಥ ಸಂಚಲನ ಗಮನ ಸೆಳೆಯಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆದ ತಂಗಡಗಿ ಗೌರವ ವಂದನೆ ಸ್ವೀಕರಿಸಿದರು.

ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.