ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು.

ಕೆಆರ್ಎಸ್ ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕಾಲದಿಂದ ನಡೆದುಕೊಂಡು ಬಂದಿದೆ. ಆಷಾಢ ಮಾಸದಲ್ಲಿ ಜರುಗುತ್ತಿರುವುದು ಇದೇ ಮೊದಲು.

ಈ ಬಾರಿ ಅಣೆಕಟ್ಟೆ ಮುಂಚಿತವಾಗಿ ಭರ್ತಿಯಾಗಿದೆ. 1989ರಿಂದ, ಅಂದರೆ 35 ವರ್ಷಗಳಿಂದ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಅವರೇ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಎನ್. ಚಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.