ಮೈಸೂರು: ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಸರಾ ಉತ್ಸವ ಸಮಿತಿ ಸಹಯೋಗದಲ್ಲಿ ಅ.3ರಿಂದ 11ರವರೆಗೆ ಇಲ್ಲಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ‘ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024’ ಆಯೋಜಿಸಲಾಗಿದೆ.

ಕನ್ನಡ ಪ್ರಕಾಶಕರು ಅಥವಾ ಮಾರಾಟಗಾರರು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮಳಿಗೆಯೊಂದಕ್ಕೆ ₹1ಸಾವಿರ ಭದ್ರತಾ ಠೇವಣಿ ಡಿಡಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹೆಸರಿನಲ್ಲಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ https://kpp.karnataka.gov.in ಜಾಲತಾಣದಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಸೆ.30ರ ಸಂಜೆ 5ರೊಳಗೆ ಸಲ್ಲಿಸಬೇಕು.

ಸಿದ್ಧಪಡಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-22484516 / 22107704 ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.