ಚನ್ನಪಟ್ಟಣ: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿರುವ ಕಾವೇರಿ ನಿರಂತರ ಹೋರಾಟ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತರು, ಸಾರ್ವಜನಿಕರಿಗೆ 365 ತೆಂಗಿನ ಸಸಿಗಳನ್ನು ವಿತರಿಸಲಾಯಿತು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ತೆಂಗಿನ ಸಸಿ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಹತ್ತಾರು ತಲೆಮಾರಿಗೆ ನೀರಿನ ಹಾಹಾಕಾರ ತಪ್ಪುತ್ತದೆ. ಜೊತೆಗೆ ಸತ್ತೇಗಾಲ ನೀರಾವರಿ ಯೋಜನೆಯನ್ನು ಶೀಘ್ರ ಮುಕ್ತಾಯ ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಪ್ರತಿವರ್ಷ ಆಗುವ ಹೆಚ್ಚುವರಿ ಮಳೆಯಿಂದ ತಮಿಳುನಾಡಿಗೆ ವ್ಯರ್ಥವಾಗಿ ನೀರು ಹರಿದು ಹೋಗುತ್ತಿದೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ ಮಾಡಿದರೆ ಈ ನೀರನ್ನು ಉಳಿಸಿಕೊಳ್ಳಬಹುದು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸದೆ ಅಣೆಕಟ್ಟು ನಿರ್ಮಾಣ ಮಾಡಲು ಕಾಳಜಿ ತೋರಬೇಕು. ಇದರಿಂದ ಆರು ಜಿಲ್ಲೆಗಳಿಗೆ ಕುಡಿಯುವ ನೀರಿನ ಜೊತೆಗೆ ಜಲವಿದ್ಯುತ್ ಉತ್ಪಾದನೆಗೆ ಅನುಕೂಲವಾಗುತ್ತದೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.

ರೈತ ಮುಖಂಡ ಹೊನ್ನಾಯ್ಕನಹಳ್ಳಿ ಕೃಷ್ಣಪ್ಪ, ಡಿಎಸ್ಎಸ್ ಸಂಚಾಲಕ ವೆಂಕಟೇಶ್, ಮುಖಂಡ ಮತ್ತೀಕೆರೆ ಹನುಮಂತಯ್ಯ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ರಾಜ್ಯ ಉಪಾಧ್ಯಕ್ಷ ರಂಜಿತ್ ಗೌಡ, ಮುಖಂಡ ಜೆಸಿಬಿ ಲೋಕೇಶ್, ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ, ಶಿಕ್ಷಕ ಪುಟ್ಟಪ್ಪಾಜಿ, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ರೈತ ಮುಖಂಡ ಗೌಡಗೆರೆ ತಿಮ್ಮೇಗೌಡ, ವೇದಿಕೆಯ ಪದಾಧಿಕಾರಿಗಳಾದ ಸೂರಿ, ಚನ್ನಪ್ಪ, ರಾಜು ಹೋಟೆಲ್, ಮೆಣಸಿನಗಹಳ್ಳಿ ಮಹೇಶ್, ಭೀಮಯ್ಯ, ಬೋರ್ ವೆಲ್ ಪುಟ್ಟು, ಉಮೇಶ್, ರಾಜಸ್ಥಾನಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.