ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಕ್ರಮ ಜರುಗಿಸಿದೆ. ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, 'ಈಶ್ವರಪ್ಪನವರು ಅಪೇಕ್ಷೆ ಪಟ್ಟಂತೆ ಉಚ್ಚಾಟನೆ ಆಗಿದೆ. ಅದರಲ್ಲಿ ನಮ್ಮ ಪಾತ್ರ ಏನೂ ಇಲ್ಲ' ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ರಾಜ್ಯದಲ್ಲಿ ಪೂರಕ ವಾತಾವರಣವಿದೆ. 28 ಸ್ಥಾನಗಳನ್ನು ಗೆಲ್ಲಲಿದ್ದೇವೆ. ನರೇಂದ್ರ ಮೋದಿ ಪರ ಅಲೆ ನೆರವಿನಿಂದ ಬಿಜೆಪಿಗೆ ಹೆಚ್ಚು ಸ್ಥಾನ ಪಡೆಯಲಿದ್ದೇವೆ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಕಾರ್ಯಕರ್ತರು ಹೆಚ್ಚಿನ ಶ್ರಮ ಪಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ಈಗ ಪೂರಕವಾದ ವಾತಾವರಣವಿದೆ. ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಕೆ.ಎಸ್.ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡುವ ಮುನ್ನ ಅವರಿಗೆ ಸಾಕಷ್ಟು ಅವಕಾಶ ನೀಡಲಾಗಿತ್ತು. ಪ್ರತಿ ರಾಜ್ಯದಲ್ಲಿ ಇರುವಂತೆ ಶಿಸ್ತು ಸಮತಿ ನಮ್ಮ ರಾಜ್ಯದಲ್ಲೂ ಇದೆ. ಈಶ್ವರಪ್ಪ ತಿದ್ದಿಕೊಳ್ಳದ ಕಾರಣ ಶಿಸ್ತು ಕ್ರಮ ಜರುಗಿದೆ ಎಂದರು.

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಬಂದರೂ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಅವರಿಂದ ಕಾಂಗ್ರೆಸ್ ಗೆ ಯಾವ ಲಾಭವೂ ಆಗೊಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.