ಕಾಳಿ ಸೇತುವೆ ಕುಸಿಯಲು ಸೇತುವೆಯ ಗುಣಮಟ್ಟ ಪರಿಶೀಲನೆ ನಡೆಸುವಲ್ಲಿ ನಿಷ್ಕಾಳಜಿತನ ತೋರಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಐ.ಆರ್.ಬಿ ಕಂಪನಿ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
‘ದುರ್ಘಟನೆಯ ಪ್ರತ್ಯಕ್ಷದರ್ಶಿಯಾಗಿರುವ ಲಾರಿ ಚಾಲಕ ತಮಿಳುನಾಡು ಮೂಲದ ರಾಧಾಕೃಷ್ಣನ್ ನೀಡಿರುವ ದೂರು ಆಧರಿಸಿ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಎನ್.ಎಚ್.ಎ.ಐ ಮತ್ತು ಐ.ಆರ್.ಬಿ ಕಂಪನಿಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ಆಸ್ತಿಗೆ ರಕ್ಷಣೆ ನೀಡದೆ ನಿಷ್ಕಾಳಜಿತನ ತೋರಿರುವ ಪ್ರಕರಣ ದಾಖಲಿಸಲಾಗಿದೆ’ ಎಂದು ಎಸ್‍ಪಿ ಎಂ.ನಾರಾಯಣ ತಿಳಿಸಿದ್ದಾರೆ.