ಕಾರವಾರ: ‘ಗ್ಯಾರಂಟಿ ಯೋಜನೆ ಅಗತ್ಯ ಇದ್ದವರು ಬಳಸಿಕೊಳ್ಳುವುದು ಸೂಕ್ತ. ಆರ್ಥಿಕ ಸ್ಥಿತಿವಂತರು ಈ ಯೋಜನೆಯ ಲಾಭವನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟರೆ ಸೂಕ್ತ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

‘ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಗೆ ಮುನ್ನ ಜನರಿಗೆ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ದೇಶಕ್ಕೆ ಮಾದರಿಯಾಗಿದೆ. ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊಡೆತ ಬಿದ್ದಿಲ್ಲ’ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕಾಂಗ್ರೆಸ್ ಸರ್ಕಾರ ಇದ್ದ ಅವಧಿಯಲ್ಲಿ ಮಂಜೂರಾಗಿದ್ದ ಸೇತುವೆ ಕಾಮಗಾರಿಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಸೇತುವೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಜತೆಗೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ. ಶೀಘ್ರದಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಳಿಸುತ್ತೇವೆ’ ಎಂದರು.

‘ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ಸಲುವಾಗಿ ಸಂಚಾರ ಸ್ಥಗಿತಗೊಳಿಸಲಾಗದು. ನಿಗದಿತ ಅವಧಿಯೊಳಗೆ ಗುತ್ತಿಗೆ ಕಂಪನಿ ಕೆಲಸ ಮುಗಿಸಿಲ್ಲ. ಶಾಸಕರು, ಸಂಸದರು ಹೆದ್ದಾರಿ ಸಂಚಾರ ನಿಷೇಧಿಸಲು ಬೆಂಬಲಿಸಿದ್ದಾರೆ. ಉಸ್ತುವಾರಿ ಕಾರ್ಯದರ್ಶಿ ರಿತೇಶಕುಮಾರ್ ಸಿಂಗ್ ಹೆದ್ದಾರಿ ಕಾಮಗಾರಿಗಳ ಕಂಪನಿಗಳ ಪರವಾಗಿದ್ದಂತೆ ತೋರಿಸುತ್ತಿದೆ. ಅವರ ಒತ್ತಡಕ್ಕೆ ಜಿಲ್ಲಾಧಿಕಾರಿ ಸಂಚಾರ ನಿಷೇಧ ಆದೇಶ ಮಾಡಿದ್ದರು. ಈಗ ಜನರ ಅಭಿಪ್ರಾಯ ಪಡೆದು ಆದೇಶ ಪರಿಷ್ಕರಿಸಲು ಸೂಚಿಸಲಾಗಿದೆ’ ಎಂದರು.

‘ಕಪ್ಪೆ ಬೊಂಡಾಸ್ ಹಿಡಿಯಲು ಹೊರರಾಜ್ಯದ ಮೀನುಗಾರರು ಸಮುದ್ರಕ್ಕೆ ಪ್ಲಾಸ್ಟಿಕ್ ಬಾಟಲಿ ಎಸೆಯುತ್ತಿರುವುದರ ಬಗ್ಗೆ ಪರಿಶೀಲಿಸಲಾಗುವುದು. ಅಂಥ ಚಟುವಟಿಕೆಗೆ ಅವಕಾಶ ಮಾಡಿಕೊಡದಂತೆ ಅಧಿಕಾರಿಗಳಿಗೆ ನಿರ್ದೇಶಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.