ವಿಜಯಪುರ: ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ವಿಶೇಷ ಎಕ್ಸ್ಪ್ರೆಸ್ ರೈಲಿನ (07377/07378) ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸೇವೆಯನ್ನು ಮುಂದುವರಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ವಿಜಯಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು(07377)ಸೇವೆಯನ್ನು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಮಾರ್ಚ್ 31 ರವರೆಗೆ ಸೂಚಿಸಲಾಗಿತ್ತು.

ಮಂಗಳೂರು ಜಂಕ್ಷನ್- ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು(07378) ಸೇವೆಯನ್ನು ಏಪ್ರಿಲ್ 2 ರಿಂದ ಅಕ್ಟೋಬರ್ 1 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಏಪ್ರಿಲ್ 1, 2024 ರವರೆಗೆ ಸೂಚಿಸಲಾಗಿತ್ತು.

ವಿಜಯಪುರ - ಮಂಗಳೂರು ಜಂಕ್ಷನ್ - ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲಿನ (07377/07378) ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ ನಂತರ, ಗುಂತಕಲ್-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ಮತ್ತು ಕಬಕ –ಪುತ್ತೂರು- ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ವೇಳಾಪಟ್ಟಿಯನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ, ಈ ಕೆಳಗಿನ ಲಿಂಕ್ https://swr.indianrailways.gov.in/view_detail.jsp?lang=0&dcd=7330&id=0,4,268 ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು.

ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ, ಸಹಾಯವಾಣಿ ಸಂಖ್ಯೆ 139 ಗೆ ಸಂಪರ್ಕಿಸಿ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.