ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸೆಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಪ್ರಕರಣಗಳನ್ನು ದಾಖಲಿಸಿದ್ದು, 9 ಜನರನ್ನು ವಶಕ್ಕೆ ಪಡೆಯಲಾಗಿದೆ.

ನಗರದ ನ್ಯೂ ಕನ್ನಡ ಪಿಯು ಕಾಲೇಜು, ಸಬಾ ಪಿಯು ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಎಲ್ಕೆಇಟಿ ಬಾಲಕಿಯರ ಪಿಯು ಕಾಲೇಜು ಮತ್ತು ಮಹಾತ್ಮ ಗಾಂಧಿ ಪಿಯು ಕಾಲೇಜುಗಳಲ್ಲಿ ವಿವಿಧ ಇಲಾಖೆಗಳ ಮತ್ತು ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವುದು ಬೆಳಕಿಗೆ ಬಂದಿದೆ.

4 ತಂಡ ರಚನೆ: ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಸುರಪುರ ಡಿವೈಎಸ್ಪಿ ಜಾವೇದ ಇನಾಮದಾರ್ ನೇತೃತ್ವದಲ್ಲಿ ಯಾದಗಿರಿ ಹಾಗೂ ಸುರಪುರ ಉಪ-ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ನಾಲ್ಕು ವಿಶೇಷ ತಂಡಗಳನ್ನು ಎಸ್ಪಿ ರಚಿಸಿದ್ದರು.

‘ಕೆಲವು ಅಭ್ಯರ್ಥಿಗಳು ಪೂರ್ವ ಯೋಜಿತವಾಗಿ ಸಂಚು ರೂಪಿಸಿ ಬ್ಲೂಟೂತ್ ಎಲೆಕ್ಟ್ರಾನಿಕ್, ಡಿವೈಸ್ ಮತ್ತು ಇತರೆ ಸೂಕ್ಷ್ಮ ಉಪಕರಣಗಳನ್ನು ಉಪಯೋಗಿಸಿ ಹೊರಗಡೆ ಇರುವ ವ್ಯಕ್ತಿಗಳಿಂದ ಉತ್ತರಗಳನ್ನು ಪಡೆಯುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ತಿಳಿಸಿದ್ದಾರೆ.

ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಲಬುರಗಿ ಜಿಲ್ಲೆಯ ಅಫಜಲಪುರ ಹಾಗೂ ವಿಜಯಪುರ ಜಿಲ್ಲೆಯ 9 ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

‘ನೈಜ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವೆಸಗುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಅಂಥ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿ ಪರೀಕ್ಷಾ ಕೇಂದ್ರಗಳ ಉಪ-ಮುಖ್ಯಸ್ಥರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುಗಳ ಆಧಾರದ ಮೇರೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ 109, 114, 120(ಬಿ), 420 ಮತ್ತು 149 ಐಪಿಸಿಯಂತೆ 5 ಪ್ರಕರಣಗಳು ದಾಖಲಿಸಲಾಗಿದೆ’ ಎಂದೂ ಮಾಹಿತಿ ನೀಡಿದ್ದಾರೆ.
.ಯಾದಗಿರಿ | ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ: ಮೂವರ ವಿಚಾರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.