–ನನ್ನ ಮಗಳು ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದು, ನೀಟ್ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾಳೆ. ವೈದ್ಯಕೀಯ ಕೋರ್ಸ್ ಬಿಟ್ಟು ಜೀವವಿಜ್ಞಾನ ಸಂಬಂಧಿತ ಯಾವ ಕೋರ್ಸ್ ಮಾಡಬಹುದು?
–ಶ್ರೀರಂಜನಿ, ಬೆಂಗಳೂರು.

ಪಿಯುಸಿ ನಂತರ ವೈದ್ಯಕೀಯ ಕೋರ್ಸ್ ಅಲ್ಲದೆ ಬಿ.ಎಸ್ಸಿ (ಪ್ಯಾರಾ ಮೆಡಿಕಲ್-20ಕ್ಕೂ ಹೆಚ್ಚು ಆಯ್ಕೆಗಳು), ಬಿ.ಎಸ್ಸಿ (ಜೀವವಿಜ್ಞಾನ, ಫಾರೆಸ್ಟ್ರಿ, ಕೃಷಿ, ತೋಟಗಾರಿಕೆ ಸೇರಿ ಹಲವು ಆಯ್ಕೆಗಳು) ಎಂಜಿನಿಯರಿಂಗ್ (ಬಯೋಟೆಕ್, ಬಯೋಮೆಡಿಕಲ್, ಜೆನೆಟಿಕ್, ಬಯೋಮಾಲಿಕ್ಯುಲಾರ್ ಇತ್ಯಾದಿ).

–ನನ್ನ ಮಗ ಬಿಸಿಎ ಕೋರ್ಸ್ ಮಾಡುತ್ತಿದ್ದು, ಸರ್ಕಾರಿ ಉದ್ಯೋಗ ಸಿಗಬಹುದೇ? ಹಾಗೂ ಇನ್ನಿತರ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿ.

–ಹೆಸರು, ಊರು ತಿಳಿಸಿಲ್ಲ.
ಐಟಿ ವಿಸ್ತಾರವಾದ ಕ್ಷೇತ್ರ. ಈ ಕ್ಷೇತ್ರದಲ್ಲಿರುವ ಆಕರ್ಷಕ ಮತ್ತು ವೈವಿಧ್ಯಮಯ ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳಲು ವೃತ್ತಿಯೋಜನೆಯಿರಬೇಕು. ಆದ್ದರಿಂದ, ಸ್ವಾಭಾವಿಕ ಪ್ರತಿಭೆ, ಆಸಕ್ತಿ, ಅಭಿರುಚಿಯಂತೆ ವೃತ್ತಿಯೋಜನೆಯನ್ನು ಮಾಡಿದರೆ ಯಾವ ಕ್ಷೇತ್ರ ಸೂಕ್ತವೆಂದು ಅರಿವಾಗುತ್ತದೆ. ಕ್ಷೇತ್ರದ ಆಯ್ಕೆಗೆ ಅನುಗುಣವಾಗಿ ಪ್ರೋಗ್ರಾಮಿಂಗ್, ಡೇಟಾ ಸೈಂಟಿಸ್ಟ್, ವೆಬ್ ಡೆವಲಪ್ಮೆಂಟ್, ಡಿಜಿಟಲ್ ಮಾರ್ಕೆಟಿಂಗ್, ಪ್ರಾಡಕ್ಟ್ ಮ್ಯಾನೇಜ್ಮೆಂಟ್, ಬ್ಲಾಕ್ಚೈನ್ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ತಜ್ಞತೆಗಾಗಿ ಸರ್ಟಿಫಿಕೆಟ್/ಡಿಪ್ಲೊಮಾ ಕೋರ್ಸ್ ಮಾಡಿದ ನಂತರವೂ ಉದ್ಯೋಗವನ್ನು ಅರಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ, ಬ್ಯಾಂಕಿಂಗ್, ಹಣಕಾಸು ವಲಯಗಳ ಅವಕಾಶಗಳನ್ನೂ ಪರಿಶೀಲಿಸಿ.

–ನಾನೀಗ ಬಿಎ (ಪತ್ರಿಕೋದ್ಯಮ ಮತ್ತು ಸಾರ್ವಜನಿಕ ನೀತಿ) ಮಾಡುತ್ತಿದ್ದೇನೆ. ಮುಂದೆ ನಾನು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮುಂದುವರೆಯಲು ಬಯಸಿದ್ದೇನೆ. ಹಾಗಾಗಿ, ನಾನು ಸಮೂಹ ಮಾಧ್ಯಮದಲ್ಲಿ ಸ್ನಾತಕೋತ್ತರ ಪದವಿ ಮಾಡುವುದು ಒಳಿತೇ? ಅಥವಾ ಬಿಎ ಪದವಿಯೊಂಂದೇ ಈ ಕ್ಷೇತ್ರದಲ್ಲಿ ಮುಂದುವರೆಯಲು ಸಾಕೇ?
–ಚರಣ್, ಬೆಂಗಳೂರು.

ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಿಎ ಪದವಿಯ ಜೊತೆಗೆ ವೃತ್ತಿ ಸಂಬAಧಿತ ಕೌಶಲಗಳಾದ ಸಂವಹನ (ಓದುವಿಕೆ, ಬರವಣಿಗೆ, ಮಾತುಗಾರಿಕೆ, ನಿರೂಪಣೆ ಇತ್ಯಾದಿ), ಭಾಷಾ ಪರಿಣತಿ, ವಿಶ್ಲೇಷಾತ್ಮಕ ಕೌಶಲ, ದಿಟ್ಟತನ, ಸಮಯದ ನಿರ್ವಹಣೆ ಇತ್ಯಾದಿಗಳನ್ನೂ ಬೆಳೆಸಿಕೊಳ್ಳಬೇಕು. ಯಾವುದೇ ವಿಚಾರವನ್ನು ಒಪ್ಪಿಕೊಳ್ಳುವ ಮುನ್ನ ತನಿಖೆ ಅಥವಾ ಪರಿಶೋಧನೆ ಮಾಡುವ ಮನಸ್ಥಿತಿ ಇರಬೇಕು. ಇದಲ್ಲದೆ, ಬೇರೆ ವೃತ್ತಿಗಳಿಗೆ ಹೋಲಿಸಿದರೆ ಪತ್ರಕರ್ತರಿಗೆ ಹೆಚ್ಚಿನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿರುವುದು ಸಹಜ; ಹಾಗಾಗಿ, ಪ್ರಾಮಾಣಿಕತೆ, ನಿಷ್ಠೆ, ಬದ್ದತೆಯನ್ನು ನಿಮ್ಮ ವ್ಯಕ್ತಿತ್ವದಲ್ಲಿ ಮೈಗೂಡಿಸಿಕೊಳ್ಳಬೇಕು. ಅತ್ಯಂತ ವಿಸ್ತಾರವಾದ ಈ ಕ್ಷೇತ್ರದಲ್ಲಿ ಮುದ್ರಣ ಮಾಧ್ಯಮ (ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಇತ್ಯಾದಿ), ಟೆಲಿವಿಷನ್, ರೇಡಿಯೊ, ಸಾಮಾಜಿಕ ಮಾಧ್ಯಮ, ವೆಬ್ಸೈಟ್ಸ್, ಬ್ಲಾಗ್ಸ್, ವಿಡಿಯೊ, ಪಾಡ್ಕಾಸ್ಟ್ ಇತ್ಯಾದಿ ವಲಯಗಳಲ್ಲಿದ್ದು, ನಿಮ್ಮ ಆಸಕ್ತಿ, ಅಭಿರುಚಿಯಂತೆ ಆಯ್ಕೆಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ತಜ್ಞತೆಗಾಗಿ, ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ/ಸ್ನಾತಕೋತ್ತರ ಕೋರ್ಸ್ ಮಾಡಬಹುದು.

–ನಾನು ಬಿಕಾಂ ಮುಗಿಸಿದ್ದೀನಿ. ಮುಂದೇನು ಮಾಡುವುದು ತಿಳಿಯುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಮನೆಯಲ್ಲಿ ಹೇಳುತ್ತಿದ್ದಾರೆ. ದಯವಿಟ್ಟೂ ನಿಮ್ಮ ಮಾರ್ಗದರ್ಶನ ನೀಡಿ.
–ಹೆಸರು, ಊರು ತಿಳಿಸಿಲ್ಲ.

ಬಿಕಾಂ ಪದವೀಧರರಿಗೆ ಈಗ ಹೆಚ್ಚಿನ ಬೇಡಿಕೆಯಿದೆ. ಹಾಗಾಗಿ, ಪದವಿಯ ನಂತರ ಬ್ಯಾಂಕಿಂಗ್, ಫೈನಾನ್ಸ್, ಇನ್ವೆಸ್ಟ್ಮೆಂಟ್, ಇನ್ಶ್ಯೂರೆನ್ಸ್, ರೀಟೇಲ್, ಮಾರ್ಕೆಟಿಂಗ್, ಎಫ್ಎಂಜಿಸಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನೀವು ವೃತ್ತಿಯನ್ನು ಅರಸಬಹುದು ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಹುದ್ದೆಗಳನ್ನೂ ಪಡೆದುಕೊಳ್ಳಬಹುದು. ಹಾಗೂ, ಬಿಕಾಂ ನಂತರ ಶಿಕ್ಷಣವನ್ನು ಮುಂದುವರೆಸಿ, ಸಿಎ (ಚಾರ್ಟೆಡ್ ಅಕೌಂಟೆಂಟ್), ಸಿಎಸ್ (ಕಂಪನಿ ಸೆಕ್ರೆಟರಿ), ಎಂಕಾಂ, ಎಂಬಿಎ ಮುಂತಾದ ಕೋರ್ಸ್ಗಳನ್ನು ಮಾಡಿ, ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ, ಈ ವಿಡಿಯೊ ವೀಕ್ಷಿಸಿ: https://www.youtube.com/watch?v=jmijSoqBDVw

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.