ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಶಾಂತಿಯುತವಾಗಿ ಆರಂಭವಾಗಿದೆ.

ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಿದ್ದು, ಸಂಜೆ 6ಕ್ಕೆ ಮುಕ್ತಾಯವಾಗಲಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕ ಕೆ ಪಳನಿಸ್ವಾಮಿ ಸೇಲಂನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಮೊದಲ ಹಂತದ ಮತದಾನದಲ್ಲಿ 1,600ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಮತ ಚಲಾಯಿಸಲು 16.63 ಕೋಟಿಗೂ ಹೆಚ್ಚು ಮಂದಿ ಅರ್ಹತೆ ಪಡೆದಿದ್ದಾರೆ.

ಎಂಟು ಮಂದಿ ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ರಾಜ್ಯಪಾಲರು ಕೂಡ ಇದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಯನ್ನು ನೆಚ್ಚಿಕೊಂಡಿದೆ. ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಎನ್ಡಿಎಗೆ ಸವಾಲು ಒಡ್ಡುವ ಪಣ ತೊಟ್ಟಿವೆ.

ಏಳು ಹಂತಗಳಲ್ಲಿ ನಡೆಯಲಿರುವ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ, ಶುಕ್ರವಾರ ನಡೆಯಲಿರುವ ಹಂತವು ಅತಿದೊಡ್ಡದು. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳ ಒಟ್ಟು 92 ಕ್ಷೇತ್ರಗಳಿಗೆ ಕೂಡ ಶುಕ್ರವಾರ ಮತದಾನ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.