ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯ್‌ಬರೇಲಿಯಲ್ಲಿ ಗೆದ್ದ ರಾಹುಲ್; ಗೆಲುವಿನ ಅಂತರದಲ್ಲಿ ಅಮ್ಮನ ಮೀರಿಸಿದ ಮಗ

Published 4 ಜೂನ್ 2024, 8:38 IST
Last Updated 4 ಜೂನ್ 2024, 8:38 IST
ಅಕ್ಷರ ಗಾತ್ರ

ರಾಯ್‌ಬರೇಲಿ: ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಗೆಲುವು ನಿಶ್ಚಿತಗೊಂಡಿದೆ.

ರಾಹುಲ್ ಗಾಂಧಿ ಅವರು 2,27,535 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

ಆ ಮೂಲಕ ಗೆಲುವಿನ ಅಂತರದಲ್ಲಿ ತಾಯಿ ಸೋನಿಯಾ ಗಾಂಧಿ ಅವರನ್ನು ರಾಹುಲ್ ಗಾಂಧಿ ಮೀರಿಸಿದ್ದಾರೆ. 2019ರಲ್ಲಿ ಸೋನಿಯಾ ಗಾಂಧಿ 1,67,178 ಮತಗಳ ಅಂತರದ ಗೆಲುವು ಸಾಧಿಸಿದ್ದರು.

2004ರಿಂದ 2019ರವರೆಗೆ ಅಮೇಠಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಹುಲ್, ಇದೇ ಮೊದಲ ಬಾರಿಗೆ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದರು.

2019ರಲ್ಲಿ ಅಮೇಠಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋಲು ಅನುಭವಿಸಿದ್ದರು. ಅಲ್ಲದೆ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.

ಈ ಸಲವೂ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT