ಕಲಬುರಗಿ: 'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಅಫಜಲಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಬುಧವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.

'ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಯಾವ ಮಹಿಳೆಯ ಮಾಂಗಲ್ಯ ಸೂತ್ರ ಕಿತ್ತುಕೊಂಡಿದೆ? ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ' ಎಂದರು.

'ನಮ್ಮ ಆಡಳಿತದಲ್ಲಿ ಭೂಸುಧಾರಣೆ, ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಿ, ಜನರಿಗೆ ಅನುಕೂಲ ಆಗುವಂತಹ ಯೋಜನೆಗಳನ್ನು ಕೊಟ್ಟಿದ್ದೇವೆ. ಪಾಕಿಸ್ತಾನ, ಚೀನಾ ಯುದ್ಧದ ವೇಳೆ ಇಂದಿರಾಗಾಂಧಿ, ಸೋನಿಯಾ ಗಾಂಧಿ ಅವರು ತಮ್ಮ ಒಡವೆ, ಆಸ್ತಿಯನ್ನು ದೇಶಕ್ಕಾಗಿ ಕೊಟ್ಟಿದ್ದಾರೆ. ಬಿಜೆಪಿಯವರ ಮನೆಯ ಒಂದು ಇಲಿಯೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿಲ್ಲ' ಎಂದು ಹೇಳಿದರು.

'ಸಿಕ್ಕ ಅಧಿಕಾರವನ್ನು ಜನರ ಹಿತಕ್ಕಾಗಿ ಬಳಸಿಕೊಳ್ಳಬೇಕು. ಆದರೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿಕೊಂಡು ದೇಶವನ್ನು ಮಾರುತ್ತಿದ್ದಾರೆ. ಅತ್ತ ಅಂಬಾನಿ ಮತ್ತು ಅದಾನಿ ಇಬ್ಬರೂ ಖರೀದಿ ಮಾಡುತ್ತಿದ್ದಾರೆ' ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
.ಮೋದಿಯಿಂದ ಕೀಳುಮಟ್ಟದ ರಾಜಕಾರಣ: 'ಮಾಂಗಲ್ಯ' ಹೇಳಿಕೆಗೆ ಮಧು ಬಂಗಾರಪ್ಪ ಟೀಕೆ.ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯ ಕಳೆದುಕೊಂಡರು: ಪ್ರಿಯಾಂಕಾ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.