ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು.

ಚಿತ್ರ ನಿರ್ಮಾಣ, ನಿರ್ದೇಶನದಲ್ಲೂ ಹೆಸರು ಮಾಡಿದ್ದ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಹಾಗೂ ಚಂದನವನದಲ್ಲಿ ಹಲವು ದಿಗ್ಗಜ ನಟರೊಂದಿಗೆ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು.
.Video | ಲೀಲಮ್ಮ ಸೆಟ್ ಗೆ ಬಂದ್ರೆ ನಮಗೆಲ್ಲ ಹಬ್ಬದಂತಿರ್ತಿತ್ತು: ನಟ ದ್ವಾರಕೀಶ್.ನಾಗವಲ್ಲಿ ಕಾಲ್ಪನಿಕ ಕಥೆ: ದ್ವಾರಕೀಶ್.
ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್–ವಿಷ್ಣು ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು. ಇವರು ಅಭಿನಯದ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು

ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಅವರು 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ.
.ದ್ವಾರಕೀಶ್ 80ರ ಹರೆಯಕ್ಕೆ ಕಾಲಿಟ್ಟಾಗ ಪ್ರಜಾವಾಣಿ ಜತೆ ತೆರೆದಿಟ್ಟ ನೆನಪುಗಳ ರೀಲು.Dwarakish Death: ದ್ವಾರಕೀಶ್ ಬದುಕಿನ ಸಂಕ್ಷಿಪ್ತ ಪರಿಚಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.