ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸರಿಗೆ ಮಂಗಳವಾರ, ₹2 ಕೋಟಿ ಹಣ ನೀಡದಿದ್ದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನಾಮಧೇಯ ವ್ಯಕ್ತಿಯಿಂದ ಸಂದೇಶ ಬಂದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೋದರನೆಂದು ಹೇಳಿಕೊಂಡು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಕರೆ ಮಾಡಿ, ₹10 ಕೋಟಿ ಹಣ ಕೇಳಿದ್ದ ವ್ಯಕ್ತಿಯನ್ನು ನೋಯ್ಡಾ ಮತ್ತು ಮುಂಬೈ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ನಿನ್ನೆ ಬಂಧಿಸಿದ್ದರು.

ಈ ತಿಂಗಳ ಆರಂಭದಲ್ಲಿ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸ್ಆ್ಯಪ್ ಹೆಲ್ಪ್ಲೈನ್ ಡೆಸ್ಕ್ಗೆ ಸಲ್ಮಾನ್ ಅವರಿಂದ ₹5 ಕೋಟಿ ಕೊಡಿಸುವಂತೆ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಪೊಲೀಸರು ಜಮ್ಶೇಡ್ಪುರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದರು.
.ಜೀವ ಬೆದರಿಕೆ | ಬಿಗಿ ಭದ್ರತೆಯೊಂದಿಗೆ ದುಬೈಗೆ ಸಲ್ಮಾನ್ ಖಾನ್ ಪ್ರಯಾಣ.ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ಸದ್ದು, ಭದ್ರತೆ ಬಿಗಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.