ಬೆಂಗಳೂರು: ಆಟ್ಲಿ ನಿರ್ದೇಶನದ, ನಟ ಶಾರುಕ್ ಖಾನ್ ಮುಖ್ಯ ಪಾತ್ರದಲ್ಲಿರುವ ಜವಾನ್ ಚಿತ್ರ ಸೆ.7 ರಂದು ಜಗತ್ತಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸಿನಿ ಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಈ ಚಿತ್ರ ಯಾವ ಒಟಿಟಿಗೆ ಹಾಗೂ ಯಾವಾಗ ಬರುತ್ತೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಇದೇ ನವೆಂಬರ್ 2 ರಂದು ನೆಟ್ಫ್ಲಿಕ್ಸ್ ಒಟಿಟಿಯಲ್ಲಿ ಜವಾನ್ ಚಿತ್ರ ಬರಲಿದೆ. ಅಂದೇ ಶಾರುಕ್ ಖಾನ್ ಅವರ 58 ನೇ ಜನ್ಮ ದಿನವಿರುವುದು ವಿಶೇಷ.

ಜವಾನ್ ಚಿತ್ರ ಬಿಡುಗಡೆಯಾಗಿ ಇಲ್ಲಿವರೆಗೆ ಬಾಕ್ಸ್ ಆಫೀಸ್ ಗಳಿಕೆ ₹ 1,150 ಕೋಟಿಗೂ ಅಧಿಕ ಎನ್ನಲಾಗಿದೆ. ಈ ಮೂಲಕ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಶಾರುಖ್ ಚಿತ್ರ ಹೊಸ ದಾಖಲೆ ಬರೆದಿದೆ. ಪಠಾಣ್ ನಂತರ ಸಾವಿರ ಕೋಟಿ ಕ್ಲಬ್ ಸೇರಿದ ಚಿತ್ರ ಇದಾಗಿದೆ.

ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಚಿತ್ರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದೆ.

ಜವಾನ್ ಚಿತ್ರದಲ್ಲಿ ವಿಜಯ್ ಸೇತುಪತಿ, ಸಂಜಯ್ ದತ್, ನಯನತಾರಾ, ದೀಪಿಕಾ ಪಡುಕೋಣೆ ವಿಶೇಷ ಪಾತ್ರಗಳ ಮೂಲಕ ಕಾಣಿಸಿಕೊಂಡಿದ್ದಾರೆ. ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾಹ್ ಖುರೇಷಿ, ರಿಧಿ ದೊಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ತಾರಾಗಣವಿದೆ.

ಸೆಪ್ಟೆಂಬರ್ 7ರಂದು ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವಿಶ್ವದಾದ್ಯಂತ ತೆರೆ ಕಂಡಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.