ಪುರಿ: ಬುಧವಾರ ನಡೆದ ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಪಟಾಕಿ ರಾಶಿಯೊಂದು ಸ್ಫೋಟಗೊಂಡು 15 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ನಡೆಯುತ್ತಿದ್ದ ನರೇಂದ್ರ ಪುಷ್ಕರಣಿ ಸುತ್ತಲೂ ನೂರಾರು ಜನ ಜಮಾಯಿಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ಪುರಿ ಜಗನ್ನಾಥ ದೇವಾಲಯದ ಕೀಲಿಕೈ ಮಾಹಿತಿ ಇದ್ದಲ್ಲಿ PM ಪತ್ತೆ ಮಾಡಲಿ: ಪಾಂಡಿಯನ್.
ಭಕ್ತರ ಗುಂಪೊಂದು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿತ್ತು. ಈ ವೇಳೆ ಮರದ ತುಂಡೊಂದು ಪಟಾಕಿ ರಾಶಿಗೆ ಬಿದ್ದು, ಸ್ಥಳದಲ್ಲಿರುವವರ ಮೇಲೆ ಪಟಾಕಿಗಳು ಹಾರಿವೆ. ಈ ಪೈಕಿ ಕೆಲವರು ಸ್ವರಕ್ಷಣೆಗಾಗಿ ಪುಷ್ಕರಣಿಗೆ ಹಾರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.
.‘ಪುರಿ ಜಗನ್ನಾಥ ಮೋದಿ ಭಕ್ತ’ ಹೇಳಿಕೆ: 3 ದಿನ ಉಪವಾಸ ಕೈಗೊಂಡ BJPಯ ಸಂಬಿತ್ ಪಾತ್ರಾ.
ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಅಲ್ಲದೆ ಗಾಯಾಳುಗಳ ಚಿಕಿತ್ಸೆಯ ಖರ್ಚನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಹೇಳಿದ್ದಾರೆ.
.LS Polls | ಪುರಿ ಜಗನ್ನಾಥ ದೇವಾಲಯ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ ಕಳವಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.