ಇಂಫಾಲ್: ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 59,564 ಜನರು ಸ್ಥಳಾಂತರಗೊಂಡಿದ್ದು, 11,133 ಮನೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ವಿಧಾನಸಭೆಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಕೆ. ರಂಜಿತ್ ಪ್ರಶ್ನೆಗೆ ಉತ್ತರಿಸಿದ ಸಿಂಗ್, ‘ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 11,133 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮನೆ ಕಳೆದುಕೊಂಡ ಸುಮಾರು 2,792 ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ‘ಒಂದು ಕುಟುಂಬ ಒಂದು ಲಕ್ಷ’ ಯೋಜನೆ ಅಡಿಯಲ್ಲಿ ₹25,000 ಮೊದಲ ಕಂತನ್ನು ಜಮೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಕಾಂಗ್ಪೊಕ್ಪಿಯಲ್ಲಿ 2,156 ಮತ್ತು ಬಿಷ್ಣುಪುರದಲ್ಲಿ 512 ಜನರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸಲಾಗಿದೆ. ಬಾಕಿ ಹಣವನ್ನು ಶೀಘ್ರದಲ್ಲೇ ಜಮೆ ಮಾಡಲಾಗುವುದು. ಭೂ ಮಾಲೀಕತ್ವಕ್ಕೆ ಸಂಬಂಧಿಸಿದ ಕೆಲವು ಗೊಂದಲಗಳಿಂದಾಗಿ ಹಣ ಬಿಡುಗಡೆ ವಿಳಂಬವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಣಿಪುರದಲ್ಲಿ ಕಳೆದ ವರ್ಷ ಮೇನಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.