ಪಟ್ನಾ: ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಹಿಂದಿನ 24 ಗಂಟೆಗಳಲ್ಲಿ ಸಿಡಿಲು ಬಡಿದು 8 ಜನರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಟ್ನಾ ಮತ್ತು ಔರಂಗಾಬಾದ್ನಲ್ಲಿ ತಲಾ ಮೂವರು ಹಾಗೂ ನವಡಾ, ಸರನ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನೀಡಿರುವ ಸಲಹೆಗಳನ್ನು ಪಾಲನೆ ಮಾಡುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ಸಿಡಿಲು ಬಡಿದ ಪರಿಣಾಮ ಗುರುವಾರ 12 ಜನರು ಮೃತಪಟ್ಟಿದ್ದರು.

‘ರೆಡ್ ಅಲರ್ಟ್’ ಘೋಷಣೆ: ಮುಂದಿನ 36 ಗಂಟೆ ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಗುಡುಗು–ಸಿಡಿಲಿನೊಂದಿಗೆ ಭಾರಿ ಮಳೆ ಬೀಳಲಿದೆ ಎಂದು ಶುಕ್ರವಾರ ಮುನ್ಸೂಚನೆ ನೀಡಿದೆ.

ಮುಂದಿನ 4–5 ದಿನಗಳು ರಾಜ್ಯದ ಬಹುತೇಕ ಭಾಗಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದೂ ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.