ನವದೆಹಲಿ: ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುವಂತೆ ಕೋರಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಜೈಲಿಗೆ ಹಾಕಿದ್ದಕ್ಕೆ ಮತದ ಮೂಲಕ ಉತ್ತರಿಸಿ) ಅಭಿಯಾನವನ್ನು ಪಕ್ಷವು ಸೋಮವಾರ ಆರಂಭಿಸಿತು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್, ‘ಪಿತೂರಿಯ ಭಾಗವಾಗಿ ಕೇಜ್ರಿವಾಲ್ ಅವರ ಬಂಧನವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಲಿ ಮುಖ್ಯಮಂತ್ರಿಯೊಬ್ಬರ ಬಂಧನವಾಗಿರುವುದು ಇದೇ ಮೊದಲು. ಹೀಗಾಗಿ ಈ ಅಭಿಯಾನ ಆರಂಭಿಸುತ್ತಿದ್ದೇವೆ’ ಎಂದು ಹೇಳಿದರು.

‘ಅಭಿಯಾನದ ಭಾಗವಾಗಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿರುವ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ತಿಳಿಸಿದರು.

ಪಕ್ಷದ ದೆಹಲಿ ಘಟಕದ ಸಂಚಾಲಕ ಗೋಪಾಲ್ ರಾಯ್, ಎಎಪಿಗೆ ಮತ ನೀಡುವ ಮೂಲಕ ’ಸರ್ವಾಧಿಕಾರ’ಕ್ಕೆ ಪ್ರತ್ಯುತ್ತರ ನೀಡಬೇಕು ಎಂದು ಕರೆ ನೀಡಿದರು.

ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ‘ಮತ ಚಲಾಯಿಸುವಾಗ ಕೇಜ್ರಿವಾಲ್ ಅವರನ್ನು ನೆನಪು ಮಾಡಿಕೊಳ್ಳಿ’ ಎಂದು ಜನರಲ್ಲಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.