ನವದೆಹಲಿ: ಕಳೆದ (2022ರ) ನವೆಂಬರ್ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬ ತಮ್ಮ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ 72 ವರ್ಷದ ಮಹಿಳೆ ಸಲ್ಲಿಸಿರುವ ಮೇಲ್ಮನವಿಯ ಕುರಿತು ಕೇಂದ್ರ ಸರ್ಕಾರ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಕಳೆದ ವರ್ಷದ ನವೆಂಬರ್ 26ರಂದು ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮದ್ಯದ ಅಮಲಿನಲ್ಲಿದ್ದ ಆರೋಪಿ ಶಂಕರ್ ಮಿಶ್ರಾ ಮೂತ್ರ ವಿಸರ್ಜಿಸಿದ್ದ. ಆತನನ್ನು ಜನವರಿ 7ರಂದು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಆರೋಪಿಗೆ ದೆಹಲಿಯ ನ್ಯಾಯಾಲಯವು ಜನವರಿ 31ರಂದು ಜಾಮೀನು ಮಂಜೂರು ಮಾಡಿತ್ತು.

ಈ ಸಂಬಂಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಮಹಿಳೆ, ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಮತ್ತು ಪ್ರಯಾಣಿಕರ ಅಶಿಸ್ತನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವುದಕ್ಕಾಗಿ ಕಡ್ಡಾಯವಾಗಿ ನಿಯಮಗಳನ್ನು ರೂಪಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರು ಹಾಗೂ ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸುವಂತೆ ಕೋರಿದ್ದರು.

ಈ ವಿಚಾರದಲ್ಲಿ ನೆರವಾಗುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿರುವ ಸುಪ್ರೀಂ ಕೋರ್ಟ್, ಮಹಿಳೆಯ ಮೇಲ್ಮನವಿಯ ವಿಚಾರಣೆಯನ್ನು ಬೇಸಿಗೆ ವಿರಾಮದ ಬಳಿಕ ಕೈಗೆತ್ತಿಕೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.