ಇಂದೋರ್: ದೆಹಲಿಯಿಂದ ಇಂದೋರ್ ಮೂಲಕ ಮುುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಬಳಿಕ ನಡೆಸಿದ ತನಿಖೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಇಂದೋರ್ನಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಏರ್ ಇಂಡಿಯಾ ಎಐ 636 ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಮಂಗಳವಾರ ಸಂಜೆ 5.8ಕ್ಕೆ ಪೋಸ್ಟ್ ಮಾಡಲಾಗಿತ್ತು. ಆಗಲೇ ದೆಹಲಿಯಿಂದ ಹೊರಟ ವಿಮಾನ ಇಂದೋರ್ನಿಂದ ಮುಂಬೈಯತ್ತ ತೆರಳಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೊಂದು ಹುಸಿ ಬಾಂಬ್ ಬೆದರಿಕೆ ಪ್ರಕರಣವಾಗಿದೆ ಎಂದು ಉಪ ಪೊಲೀಸ್ ಆಯುಕ್ತ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.

ದೇಶದ ವಿವಿಧ ವಿಮಾನಯಾನ ಸಂಸ್ಥೆಗಳ 100ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಯ ಹುಸಿ ಕರೆಗಳು ಮಂಗಳವಾರ ಬಂದಿವೆ. ಕಳೆದ 16 ದಿನಗಳಲ್ಲಿ ದೇಶೀಯ ಹಾಗೂ ಅಂತರರಾಷ್ಟ್ರೀಯ ಸೇರಿದಂತೆ 510ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.
.ಇಂಡಿಗೊ–ವಿಸ್ತಾರಾ ಸೇರಿ ದೇಶದಾದ್ಯಂತ 50ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ.ಬಾಂಬ್ ಬೆದರಿಕೆ: ಭಯೋತ್ಪಾದನೆ ಬಗ್ಗೆ ಪುಸ್ತಕ ಬರೆದಿದ್ದ ವ್ಯಕ್ತಿಯಿಂದ ಕೃತ್ಯ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.